ಮಡಿಕೇರಿ, ಫೆ. ೨೦: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಸಂಸ್ಥಾಪಕರ ದಿನಾಚರಣೆ ತಾ. ೨೨ ರಂದು ಬೆಳಿಗ್ಗೆ ೧೦ ಗಂಟೆಗೆ ನಗರದ ಸಂತ ಜೋಸೆಫರ ಶಾಲೆಯಲ್ಲಿ ನಡೆಯಲಿದೆ. ಜಿಲ್ಲಾಧಿಕಾರಿ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಅಧ್ಯಕ್ಷೆ ಚಾರುಲತ ಸೋಮಲ್ ಅಧ್ಯಕ್ಷತೆ ವಹಿಸಲಿದ್ದಾರೆ. ನ್ಯಾಯಾಧೀಶೆ ನೂರುನ್ನೀಸಾ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪ್ರದಾನ ಆಯುಕ್ತ ಮಚ್ಚಾಡೋ ಇತರರು ಪಾಲ್ಗೊಳ್ಳಲಿದ್ದಾರೆ.