ಸೋಮವಾರಪೇಟೆ,ಫೆ.೨೧: ದಲಿತ ಹಿತರಕ್ಷಣಾ ವೇದಿಕೆಯ ಒಕ್ಕೂಟದ ವತಿಯಿಂದ ಇಲ್ಲಿನ ಅಂಬೇಡ್ಕರ್ ಭವನದಲ್ಲಿ ಜ್ಯೋತಿ ಬಾಪುಲೆ ಅವರ ಜನ್ಮ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಒಕ್ಕೂಟದ ಸಂಚಾಲಕ ಜಯಪ್ಪ ಹಾನಗಲ್ಲು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಒಕ್ಕೂಟದ ಜಿಲ್ಲಾಧ್ಯಕ್ಷ ಡಿ.ಎಸ್. ನಿರ್ವಾಣಪ್ಪ, ಉಪಾಧ್ಯಕ್ಷ ಕೆ.ಬಿ. ರಾಜು, ನರಸಯ್ಯ ಅಜಯ್, ವೀಣಾ, ಕಾಳಪ್ಪ ಮತ್ತಿತರರು ಉಪಸ್ಥಿತರಿದ್ದರು.