ಕೂಡಿಗೆ, ಫೆ. ೨೧: ಕಾವೇರಿ ನೀರಾವರಿ ನಿಗಮದ ಮೂಲಕ ಹಾರಂಗಿ ಅಚ್ಚುಕಟ್ಟು ವ್ಯಾಪ್ತಿಯ ಮೂರು ಗ್ರಾಮ ಪಂಚಾಯಿತಿಗೆ ಸೇರಿದ ಕಾಮಗಾರಿಗೆ ಸರಕಾರದ ಅನುಮೋದನೆ ದೊರತು, ಈಗಾಗಲೇ ರೂ. ೨೩ ಕೋಟಿ ಹಣ ಬಿಡುಗಡೆಯಾಗಿದೆ. ಸದ್ಯದಲ್ಲಿಯೆ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು ಎಂದು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ತಿಳಿಸಿದರು

ತೊರೆನೂರು ಗ್ರಾಮದಲ್ಲಿ ನಡೆದ ಸಹಕಾರ ಸಂಘದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾವೇರಿ ನೀರಾವರಿ ನಿಗಮದ ವತಿಯಿಂದ ಶಿರಂಗಾಲ, ಹೆಬ್ಬಾಲೆ, ತೊರೆನೂರು ಮೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀರಾವರಿ ಇಲಾಖೆಗೆ ಒಳಪಡುವ ರಸ್ತೆಗಳು ಕಿರು ಸೇತುವೆ ಸೇರಿದಂತೆ ಪ್ರಮುಖ ನೀರು ಹರಿಯುವ ಕಾಲುವೆಗಳ ಕಾಂಕ್ರೀಟಿಕರಣ ಮತ್ತು ಉಪ ಕಾಲುವೆಗಳ ದುರಸ್ತಿಗೆ ಹಣ ಬಿಡುಗಡೆಯಾಗಿದ್ದು ಕಾಮಗಾರಿಯನ್ನು ಪ್ರಾರಂಭಿಸಲಾಗುವುದು ಎಂದರು.

ಸಂದರ್ಭ ಜಿಲ್ಲಾ ಪಂಚಾಯಿತಿ ಸದಸ್ಯ ಶ್ರೀನಿವಾಸ, ತಾಲೂಕು ಪಂಚಾಯಿತಿ ಸದಸ್ಯ ಜಯಣ್ಣ, ತೊರೆನೂರು ದೇವಾಲಯ ಸಮಿತಿಯ ಅಧ್ಯಕ್ಷ ಹೆಚ್.ಬಿ. ಚಂದ್ರಪ್ಪ, ತಾಲೂಕು ಬಿ.ಜೆ.ಪಿ. ಅಧ್ಯಕ್ಷ ಮನು ಕುಮಾರ್ ರೈ, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಬಾಸ್ಕರ್ ನಾಯಕ, ಕೂಡಿಗೆ ಕೊಡವ ಕೂಟದ ಮಾಜಿ ಅಧ್ಯಕ್ಷ ಮನುನಂಜುA ಸೇರಿದಂತೆ ಗ್ರಾಮದ ಪ್ರಮುಖರು ಮತ್ತು ರೈತರು ಹಾಜರಿದ್ದರು.