ಕುಶಾಲನಗರ, ಫೆ. 21: ಕೊಡಗು ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ನಿಯಂತ್ರಣ ಸಂಬಂಧಿಸಿದಂತೆ ಕುಶಾಲನಗರ ಗಡಿಭಾಗದಲ್ಲಿ ಕೇರಳ, ಮಹಾರಾಷ್ಟ್ರ ರಾಜ್ಯಗಳ ವಾಹನಗಳಿಗೆ ಜಿಲ್ಲೆಗೆ ಪ್ರವೇಶ ನಿರ್ಬಂಧ ಹೇರಲಾಗಿದ್ದು, ಕಟ್ಟುನಿಟ್ಟಿನ ತಪಾಸಣೆ ಆರಂಭವಾಗಿದೆ.
ಸೋಮವಾರಪೇಟೆ ತಾಲೂಕು ತಹಶೀಲ್ದಾರ್ ಗೋವಿಂದರಾಜ್ ನೇತೃತ್ವದಲ್ಲಿ ಕಂದಾಯ, ಆರೋಗ್ಯ ಮತ್ತು ಪೆÇಲೀಸ್ ಇಲಾಖೆಯ ಸಿಬ್ಬಂದಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.