ಕೂಡಿಗೆ, ಫೆ. ೨೧: ಶಿರಂಗಾಲ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು.
ಕ್ರೀಡಾಕೂಟವನ್ನು ಹಿರಿಯ ಉಪನ್ಯಾಸಕ ಹಂಡ್ರAಗಿ ನಾಗರಾಜ್ ಉದ್ಘಾಟಿಸಿದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಶ್ರೀಲತಾ ವಹಿಸಿದ್ದರು. ಕ್ರೀಡಾಕೂಟದಲ್ಲಿ ಮುಖ್ಯ ಶಿಕ್ಷಕ ಸೋಮಯ್ಯ, ಉಪನ್ಯಾಸಕ ಶಿವಕುಮಾರ್ ಎಸ್ ಆರ್ ವೆಂಕಟೇಶ್ ಮೊದಲಾದವರು ಉಪಸ್ಥಿತರಿದ್ದರು ದೈಹಿಕ ಶಿಕ್ಷಕರಾದ ಬೋಜೇಗೌಡ, ಸೌಮ್ಯ ತೀರ್ಪುಗಾರರಾಗಿ ಕಾರ್ಯ ನಿರ್ವಹಿಸಿದರು.