ಕುಶಾಲನಗರ, ಫೆ. ೨೧: ತೈಲ ಬೆಲೆ ಏರಿಕೆ ಬಗ್ಗೆ ಕಾಂಗ್ರೆಸ್ ಎಲ್ಲೆಡೆ ಪ್ರತಿಭಟನೆ ನಡೆಸುವ ಮೂಲಕ ವ್ಯಾಪಕ ವಿರೋಧ ವ್ಯಕ್ತಪಡಿಸುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಹೇಳಿದರು.

ಅವರು ಜಿಲ್ಲೆಯ ಕೊಂಡAಗೇರಿಯಲ್ಲಿ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಬೆಂಗಳೂರಿಗೆ ತೆರಳುವ ಸಂದರ್ಭ ಕುಶಾಲನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಧಾನಮಂತ್ರಿ ಮೋದಿ ವಿರುದ್ದ ವಾಗ್ದಾಳಿ ನಡೆಸಿದರು. ದಿನನಿತ್ಯ ತೈಲ ಬೆಲೆ ಏರಿಕೆಯಾಗುವುದರೊಂದಿಗೆ ಜನರಿಗೆ ತೊಂದರೆಯಾಗುತ್ತಿದೆ ಎಂದರು. ಸಂದರ್ಭ ಯೂತ್ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಮಿಥುನ್ ಹಾನಗಲ್, ಕುಶಾಲನಗರ ಬ್ಲಾಕ್ ಅಧ್ಯಕ್ಷ ಕಿರಣ್, ಪ್ರಮುಖರಾದ ಶಿವಶಂಕರ್, ನಂಜುAಡಸ್ವಾಮಿ, ಚಿರು ಮತ್ತಿತರರು ಇದ್ದರು.