ಮಡಿಕೇರಿ, ಫೆ. ೨೨: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಏಳು ದಿನಗಳ ಅರೆಭಾಷೆ ಸಂಸ್ಕೃತಿ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭವು ತಾ. ೨೩ ರಂದು (ಇಂದು) ಬೆಳಗ್ಗೆ ೧೦.೩೦ ಗಂಟೆಗೆ ನಗರದ ಕೊಡಗು ಗೌಡ ಮಹಿಳಾ ಒಕ್ಕೂಟ (ಗುಡ್ಡೆಮನೆ ಅಯ್ಯಪ್ಪಗೌಡ ರಸ್ತೆ) ಇಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಅಂಬೆಕಲ್ಲು ಸುಶೀಲ ಕುಶಾಲಪ್ಪ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಲಕ್ಷಿö್ಮÃನಾರಾಯಣ ಕಜೆಗದ್ದೆ, ಮಡಿಕೇರಿ ಕೊಡಗು ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷೆ ಕುಂಜಿಲನ ಮುತ್ತಮ್ಮ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.