ಮಡಿಕೇರಿ, ಫೆ.೨೨: ಕರ್ನಾಟಕ ರಾಜ್ಯ ಪತ್ರಾಗಾರ ಇಲಾಖೆ, ಮೈಸೂರು ವಿಭಾಗೀಯ ಪತ್ರಾಗಾರ ಕಚೇರಿ ಹಾಗೂ ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಇತಿಹಾಸ ಮತ್ತು ಐಕ್ಯೂಎಸಿ ವಿಭಾಗ ಇವರ ಸಹಯೋಗದೊಂದಿಗೆ ತಾ. ೨೫ ಮತ್ತು ೨೬ ರಂದು ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಸಭಾಂಗಣದಲ್ಲಿ ಐತಿಹಾಸಿಕ ದಾಖಲೆಗಳು ಮತ್ತು ಛಾಯಾಚಿತ್ರಗಳ ಪ್ರದರ್ಶನ ನಡೆಯಲಿದೆ.

ತಾ. ೨೫ ರಂದು ಬೆಳಗ್ಗೆ ೧೧ ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಶಾಸಕ ಎಂ.ಪಿ. ಅಪ್ಪಚ್ಚುರಂಜನ್, ಕರ್ನಾಟಕ ರಾಜ್ಯ ಪತ್ರಾಗಾರ ಇಲಾಖೆಯ ನಿರ್ದೇಶಕಿ ರಾಜಮ್ಮ ಚೌಡರೆಡ್ಡಿ, ಸ.ಪ್ರ.ದ.ಮಹಿಳಾ ಕಾಲೇಜಿನ ಪ್ರಾಂಶುಪಾಲ ಪ್ರೊ.ಡಿ.ಜೆ.ಜವರಪ್ಪ, ಮೈಸೂರು ವಿಭಾಗೀಯ ಪತ್ರಾಗಾರ ಕಚೇರಿಯ ಹಿರಿಯ ಸಹಾಯಕ ನಿರ್ದೇಶಕ ಎಚ್.ಎಲ್.ಮಂಜುನಾಥ, ಮಡಿಕೇರಿ ಸ.ಪ್ರ.ದ.ಮ. ಕಾಲೇಜಿನ ಸಹಾಯಕ ಪ್ರಾಧ್ಯಾಪಕರು ಹಾಗೂ ಐಕ್ಯೂಎಸಿ ಸಂಚಾಲಕ ಎನ್.ಪಿ. ಸತೀಶ್, ಸಹಾಯಕ ಪ್ರಾಧ್ಯಾಪಕರು ಹಾಗೂ ಸಂಚಾಲಕಿ ಡಾ.ಡಿ.ಕನ್ನಿಕಾ ಇತರರು ಪಾಲ್ಗೊಳ್ಳಲಿದ್ದಾರೆ.