ಪುದುಚೇರಿಯಲ್ಲಿ ರಾಷ್ಟçಪತಿ ಆಡಳಿತ ಸನ್ನಿಹಿತ

ಪುದುಚೇರಿ, ಫೆ. ೨೨: ಪುದುಚೇರಿ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲು ವಿಫಲವಾದ ಕಾಂಗ್ರೆಸ್-ಡಿಎAಕೆ ಸರ್ಕಾರ ಸೋಮವಾರ ಪತನಗೊಂಡಿದ್ದು, ನೂತನ ಸರ್ಕಾರ ರಚೆನೆಗೆ ಹಕ್ಕು ಮಂಡಿಸದಿರಲು ಬಿಜೆಪಿ ನಿರ್ಧರಿಸಿದ ಹಿನ್ನೆಲೆಯಲ್ಲಿ ಕೇಂದ್ರಾಡಳಿತ ಪ್ರದೇಶದಲ್ಲಿ ರಾಷ್ಟçಪತಿ ಆಡಳಿತ ಜಾರಿಗೊಳಿಸುವುದು ಬಹುತೇಕ ಖಚಿತವಾಗಿದೆ. ಈ ಹಂತದಲ್ಲಿ ನಾವು ಸರ್ಕಾರ ರಚಿಸಲು ಪ್ರಯತ್ನಿಸುವುದಿಲ್ಲ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜನರ ಆಶೀರ್ವಾದ ಮತ್ತು ಮೋದಿ ಜಿ ಅವರ ನಾಯಕತ್ವದೊಂದಿಗೆ, ಮೇ ತಿಂಗಳಲ್ಲಿ ಬಿಜೆಪಿ ಮತ್ತು ಅದರ ಮಿತ್ರ ಪಕ್ಷಗಳು ಸೇರಿ ಹೊಸ ಸರ್ಕಾರ ರಚಿಸಲಿದೆ. ಇದು ಪುದುಚೇರಿಯ ಜನರಿಗೆ ಉಜ್ವಲ ಭವಿಷ್ಯ ನಿರ್ಮಿಸುತ್ತದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ವಿ ಸ್ವಾಮಿನಾಥನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮದುವೆ ಸಮಾರಂಭಕ್ಕೆ ಮಾರ್ಷಲ್ ನಿಯೋಜನೆ

ಬೆಂಗಳೂರು,ಫೆ. ೨೨: ಮದುವೆ ಸಮಾರಂಭಗಳಲ್ಲಿ ಕೋವಿಡ್ ಸುರಕ್ಷತಾ ಕ್ರಮ ಪಾಲಿಸಲು ಮಾರ್ಷಲ್ ನಿಯೋಜಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಎಲ್ಲ ಜಿಲ್ಲೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮದುವೆ ಸಮಾರಂಭಗಳಲ್ಲಿ ಅಂತರ ಕಾಯ್ದುಕೊಳ್ಳುತ್ತಿಲ್ಲ. ನಾನೇ ಸಮಾರಂಭಕ್ಕೆ ಹೋದರೆ ಮಾಸ್ಕ್ ತೆಗೆಯಿರಿ ಎಂದು ಹೇಳುತ್ತಾರೆ. ಹೀಗಾಗಿ ಮದುವೆ ಸಮಾರಂಭಗಳಲ್ಲಿ ಒಬ್ಬ ಮಾರ್ಷಲ್ ನೇಮಿಸಲು ತೀರ್ಮಾನ ಕೈಗೊಳ್ಳಲಾಗಿದೆ. ೫೦೦ ಕ್ಕಿಂತ ಹೆಚ್ಚು ಜನರಿರಬಾರದು, ಎಲ್ಲರೂ ಮಾಸ್ಕ್ ಧರಿಸುವ ನಿಯಮವನ್ನು ಪಾಲಿಸಲು ಈ ಕ್ರಮ ವಹಿಸಲಾಗುವುದು. ಆಹಾರ ಪೂರೈಕೆ ಮಾಡುವವರಿಗೂ ಪರೀಕ್ಷೆ ಮಾಡಿಸಲು ಸೂಚಿಸಲಾಗಿದೆ ಎಂದರು. ಕೋವಿಡ್ ಮಾರ್ಗಸೂಚಿಗೆ ವಿರುದ್ಧವಾಗಿ ಸಭೆ, ಸಮಾರಂಭ, ಹೋರಾಟ ನಡೆಯುತ್ತಿದೆ. ಇದನ್ನು ಪಾಲಿಸದೇ ಕೋವಿಡ್ ಸೋಂಕು ಹೆಚ್ಚಾದರೆ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ. ಮಹಾರಾಷ್ಟçದ ಕೆಲ ಜಿಲ್ಲೆಗಳಲ್ಲಿ ಲಾಕ್‌ಡೌನ್ ಆಗಿದ್ದು, ಆ ಪರಿಸ್ಥಿತಿ ರಾಜ್ಯಕ್ಕೆ ಬರಬೇಕೆ ಎಂದು ಆಲೋಚಿಸಬೇಕು ಎಂದು ಕಿವಿಮಾತು ಹೇಳಿದರು.

ಜಾನಪದ ವಿವಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಗೆ ತರಲು ಚಿಂತನೆ

ಬೆಂಗಳೂರು,ಫೆ.೨೨ : ಜಾನಪದ ವಿಶ್ವವಿದ್ಯಾಲಯವು ಸೇರಿದಂತೆ ಕನ್ನಡ ಭಾಷೆ ಮತ್ತು ಸಂಸ್ಕೃತಿಗೆ ಸಂಬAಧಪಟ್ಟ ಕನ್ನಡ ವಿಶ್ವವಿದ್ಯಾಲಯ, ಸಂಗೀತ ವಿಶ್ವವಿದ್ಯಾಲಯ ಹಾಗೂ ಲಲಿತ ಕಲಾ ವಿಶ್ವವಿದ್ಯಾಲಯ ಸೇರಿದಂತೆ ವಿವಿಧ ವಿಶ್ವವಿದ್ಯಾಲಯಗಳು ಮತ್ತು ಪ್ರಾಧಿಕಾರಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವ್ಯಾಪ್ತಿಗೆ ತರಲು ಚಿಂತನೆ ನಡೆದಿದೆ ಎಂದು ಅರಣ್ಯ,ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ. ಅವರು ಇಂದು ಚಾಮರಾಜಪೇಟೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಮಂದಿರದಲ್ಲಿ ಕನ್ನಡಸಾಹಿತ್ಯಪರಿಷತ್ತು ಏರ್ಪಡಿಸಿದ್ದ ಗೌರವ ಸದಸ್ಯತ್ವ ಪ್ರದಾನ ಸಮಾರಂಭದಲ್ಲಿ ಮಾತನಾಡುತ್ತಾ ಈ ವಿಚಾರ ಪ್ರಕಟಿಸಿದರು. ಕನ್ನಡ ಭಾಷೆ ಮತ್ತು ಸಂಸ್ಕೃತಿಗೆ ಸಂಬAಧಪಟ್ಟ ವಿಚಾರಗಳು, ಕಲಾವಿದರು ಮತ್ತು ಅವರ ಅಧ್ಯಯನ ಒಂದು ಸೂರಿನಡಿ ಬಂದರೆ ,ಅದರಿಂದ ಭಾಷೆಯ ಬೆಳವಣಿಗೆ ಮತ್ತು ಸಂಸ್ಕೃತಿಯ ಅಭಿವೃದ್ಧಿಗೆ ಹೆಚ್ಚು ಅನುಕೂಲವಾಗುತ್ತದೆ, ಆದಕಾರಣ ಇಂತಹ ಒಂದುನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದರು.

ಒಕ್ಕಲಿಗ ಸಮುದಾಯಕ್ಕೆ ನಿಗಮ ರಚನೆಗೆ ಬದ್ಧ: ಆರ್. ಅಶೋಕ್

ಬೆಂಗಳೂರು, ಫೆ.೨೨: ಒಕ್ಕಲಿಗ ಸಮುದಾಯಕ್ಕೆ ಪ್ರಾಧಿಕಾರ ರಚನೆ ಮಾಡಲು ಸರಕಾರ ಬದ್ಧವಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಭರವಸೆ ನೀಡಿದ್ದಾರೆ. ಬೆಂಗಳೂರಿನ ವಿಜಯನಗರದಲ್ಲಿರುವ ಆದಿಚುಂಚನಗಿರಿ ಮಠದಲ್ಲಿ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಮತ್ತು ಪಟ್ಟ ನಾಯಕನ ಹಳ್ಳಿಯ ಸ್ಫಟಿಕ ಪುರಿ ಮಠದ ಮಠಾಧೀಶರಾದ ಶ್ರೀ ನಂಜಾವಧೂತ ಸ್ವಾಮೀಜಿ ಮತ್ತು ಇತರ ಮುಖಂಡರಿAದ ಮನವಿ ಸ್ವೀಕರಿಸಿದ ನಂತರ ಸಚಿವ ಅಶೋಕ್ ಮಾತನಾಡಿದರು. ಒಕ್ಕಲಿಗರ ಮೀಸಲಾತಿ ಹೆಚ್ಚಳ, ಒಕ್ಕಲಿಗ ಅಭಿವೃದ್ಧಿ ಪ್ರಾಧಿಕಾರ ರಚನೆ ಮತ್ತು ಒಕ್ಕಲಿಗ ಸಮುದಾಯದ ಎಲ್ಲ ೧೧೫ ಪಂಗಡಗಳನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರ್ಪಡೆ ಮಾಡಬೇಕು ಎಂದು ಒಕ್ಕಲಿಗ ಸಮುದಾಯ ಸರಕಾರಕ್ಕೆ ಮನವಿ ಸಲ್ಲಿಸಿದೆ. ಈ ಎಲ್ಲ ಬೇಡಿಕೆಗಳನ್ನು ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಒಕ್ಕಲಿಗ ಅಭಿವೃದ್ಧಿ ನಿಗಮ ರಚಿಸಿ ೧೦೦೦ ಕೋಟಿ ರೂಪಾಯಿ ಅನುದಾನ ನೀಡಲು ಬೇಡಿಕೆ ಸಲ್ಲಿಸಲಾಗಿದೆ.