*ಕೊಡ್ಲಿಪೇಟೆ,ಫೆ.೨೨: ಕೊಡ್ಲಿಪೇಟೆ ಯಲ್ಲಿ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ತಾಲೂಕು ಘಟಕದ ಅಧ್ಯಕ್ಷರ ಪದಗ್ರಹಣ ಮತ್ತು ಕವಿಯಿತ್ರಿ ರುಮಾನ ಜಮೀರ್ ಅವರ ಹೃದಯ ದನಿ ಕೃತಿ ಲೋಕಾರ್ಪಣೆ ಕಾರ್ಯಕ್ರಮ ಇಲ್ಲಿನ ಹಲಸಿನಮರ ಗೌರಮ್ಮ ಶಾಂತಮಲ್ಲಪ್ಪ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬೆಂಗಳೂರಿನ ಕೇಂದ್ರ *ಕೊಡ್ಲಿಪೇಟೆ,ಫೆ.೨೨: ಕೊಡ್ಲಿಪೇಟೆ ಯಲ್ಲಿ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ತಾಲೂಕು ಘಟಕದ ಅಧ್ಯಕ್ಷರ ಪದಗ್ರಹಣ ಮತ್ತು ಕವಿಯಿತ್ರಿ ರುಮಾನ ಜಮೀರ್ ಅವರ ಹೃದಯ ದನಿ ಕೃತಿ ಲೋಕಾರ್ಪಣೆ ಕಾರ್ಯಕ್ರಮ ಇಲ್ಲಿನ ಹಲಸಿನಮರ ಗೌರಮ್ಮ ಶಾಂತಮಲ್ಲಪ್ಪ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬೆಂಗಳೂರಿನ ಕೇಂದ್ರ ಬೆಳೆಯಲು ಸಾಧ್ಯವಾಗುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಸಾಹಿತ್ಯ ಅಭಿರುಚಿ ಯನ್ನು ಬೆಳೆಸಿ ಕೊಳ್ಳಬೇಕೆಂದರು.

ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಬೆಳವಣಿಗೆಗಾಗಿ ಬೇರೆ ಬೇರೆ ಕನ್ನಡ ಘಟಕಗಳು ಕಾರ್ಯನಿರ್ವಹಿಸುತ್ತಿವೆ. ಹೊಸ ಕನ್ನಡ ಪ್ರತಿಭೆಗಳನ್ನು ಬೆಳೆಸುವ ಸಲುವಾಗಿ ಘಟಕವನ್ನು ಸ್ಥಾಪಿಸಲಾಗಿದ್ದು ಈ ನಿಟ್ಟಿನಲ್ಲಿ ಹೊಸ ಕನ್ನಡ ಪ್ರತಿಭೆಗಳನ್ನು ಪ್ರೋತ್ಸಾಹಿಸುತ್ತಿದೆ ಎಂದರು.

ಕೇAದ್ರ ಕನ್ನಡ ಸಾಹಿತ್ಯ ವೇದಿಕೆಯ ಸೋಮವಾರಪೇಟೆ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕಾಲೇಜಿನ ಉಪನ್ಯಾಸಕಿ ರುಮಾನ ಜಮೀರ್ ಅವರು ಅಧಿಕಾರ ವಹಿಸಿಕೊಂಡು ಮಾತನಾಡಿ, ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಕ್ಷೇತ್ರವನ್ನು ಇನ್ನಷ್ಟು ವಿಸ್ತರಿಸಲು ಶ್ರಮಿಸಲಾಗುವದು. ವಿದ್ಯಾರ್ಥಿಗಳು ಗುರು ಹಿರಿಯರು, ತಂದೆ ತಾಯಿಗೆ ಗೌರವ ನೀಡಿದರೆ ಭವಿಷ್ಯದಲ್ಲಿ ಯಶಸ್ಸುಗಳಿಸಲು ಸಾಧ್ಯವಾಗುತ್ತದೆ ಎಂದರು.

ವಿದ್ಯಾಸAಸ್ಥೆ ಅಧ್ಯಕ್ಷ ಎಚ್.ಎಸ್.ಚಂದ್ರಮೌಳಿ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಕಷ್ಟ, ಅವಮಾನ, ನೋವುಗಳ ಪೆಟ್ಟು ತಿಂದರೆ ಮಾತ್ರ ಜೀವನದಲ್ಲಿ ಉತ್ತಮ ವ್ಯಕ್ತಿಯಾಗಲು ಸಾಧ್ಯವಾಗುತ್ತದೆ, ಎಲ್ಲಾ ರೀತಿಯ ಭಾವನೆಗಳನ್ನು ಸ್ವೀಕರಿಸಬೇಕು. ಭಾವನೆಗಳಿಲ್ಲದ ವ್ಯಕ್ತಿಯಲ್ಲಿ ಸಂಸ್ಕಾರ ಬೆಳೆಯುವುದಿಲ್ಲ. ಈ ದಿಸೆಯಲ್ಲಿ ವಿದ್ಯಾರ್ಥಿಗಳು ಎಲ್ಲಾ ರೀತಿಯ ಸದ್ಭಾವನೆಗಳನ್ನು ಬೆಳೆಸಿಕೊಳ್ಳುವ ಮೂಲಕ ಸಾಹಿತ್ಯ, ಕಲೆ, ಸಂಸ್ಕೃತಿಯನ್ನು ಬೆಳೆಸುವಂತೆ ಸಲಹೆ ನೀಡಿದರು.

ಕವಯತ್ರಿ ರುಮಾನ ಜಮೀರ್ ಬರೆದಿರುವ ಹೃದಯ ದನಿ ಕೃತಿಯ ಬಗ್ಗೆ ಸಾಹಿತಿ ಸತೀಶ್ ಕಾಜೂರು ಮಾತನಾಡಿದರು. ಸಕಲೇಶಪುರದ ಮಹಿಳಾ ಸಾಹಿತಿ ಫರ್ವಾಜ್ ರಿಜ್ವಾನ್ ಮಾತನಾಡಿದರು. ಸಮಾರಂಭದಲ್ಲಿ ವಿದ್ಯಾಸಂಸ್ಥೆ ಗೌರವಾಧ್ಯಕ್ಷ ಎಸ್.ಎಸ್.ನಾಗರಾಜ್, ಕೊಡ್ಲಿಪೇಟೆ ಗ್ರಾ.ಪಂ.ಅಧ್ಯಕ್ಷ ಚಂದ್ರಶೇಖರ್, ಉಪಾಧ್ಯಕ್ಷೆ ಗೀತ ತ್ಯಾಗರಾಜ್, ಪ್ರಮುಖರಾದ ಸುಬ್ರಮಣಿ, ಔರಂಗಜೇಬ್, ಯತೀಶ್, ಶಿವಪ್ರಸಾದ್, ಕಾಲೇಜು ಪ್ರಾಂಶುಪಾಲ ಎಂ.ಆರ್.ನಿರAಜನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.