ಫೆ.೨೨: ರೈತ ವಿರೋಧಿ ಕೃಷಿ ಸಂಬAಧಿತ ತಿದ್ದುಪಡಿ ಮಸೂದೆಗಳು ಮತ್ತು ಕಾರ್ಮಿಕ ವಿರೋಧಿ ತಿದ್ದುಪಡಿಗಳನ್ನು ರಾಜ್ಯ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ತಿರಸ್ಕರಿಸಬೇಕೆಂದು ಆಗ್ರಹಿಸಿ ಸಿ.ಐ.ಟಿ.ಯು (ಸೆಂಟರ್ ಆಫ್ ಟ್ರೇಡ್ ಯೂನಿಯನ್) ತಾಲೂಕು ಸಮಿತಿ ವತಿಯಿಂದ ಇಲ್ಲಿನ ಶಾಸಕರ ಕಚೇರಿ ಹಾಗೂ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಸಮಿತಿಯ ಸಂಚಾಲಕ ಪಿ.ಆರ್.ಭರತ್ ನೇತೃತ್ವದಲ್ಲಿ ಧರಣಿ ನಡೆಸಿದ ಪದಾಧಿಕಾರಿಗಳು, ತಹಶೀಲ್ದಾರ್ ಕಚೇರಿ ಮೂಲಕ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಿದರು. ೨೯ ಕಾನೂನುಗಳನ್ನು ೪ ಸಂಹಿತೆಗಳನ್ನಾಗಿ ಮಾಡಿರುವ ಕೇಂದ್ರದ ಶಾಸನಗಳನ್ನು ರಾಜ್ಯ ಸರಕಾರ ಜಾರಿ ಮಾಡಬಾರದು. ರೈತ ವಿರೋಧಿಯಾದ ೩ ಕೃಷಿ ಕಾನೂನುಗಳನ್ನು ಹಿಂಪಡೆಯಬೇಕು. ಕೇಂದ್ರದ ಶಾಸನಗಳನ್ನು ತಿರಸ್ಕರಿಸಪ್ರತಿಭಟನಾಕಾರರು ಆಗ್ರಹಿಸಿದರು.

ಬೆಲೆ ಏರಿಕೆ ಆಧಾರದಲ್ಲಿನ ತುಟ್ಟಿ ಭತ್ಯೆಯೊಂದಿಗೆ ಎಲ್ಲಾ ವಿಭಾಗಗಳ ಕಾರ್ಮಿಕರಿಗೂ ಸಾಮಾನ್ಯ ಕನಿಷ್ಟ ವೇತನ ಜಾರಿಯಾಗಬೇಕು. ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ವಾರ್ಷಿಕ ೨೦೦ ದಿನಗಳ ಕೆಲಸ ಹಾಗೂ ದಿನಕ್ಕೆ ೭೦೦ ರೂ.ವೇತನ ನೀಡಬೇಕು. ಎಲ್ಲಾ ಜಿಲ್ಲೆಗಳಲ್ಲೂ ಕಾರ್ಮಿಕ ನ್ಯಾಯಾಲಯಗಳನ್ನು ಸ್ಥಾಪಿಸಬೇಕು. ಇದರೊಂದಿಗೆ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ೩೦ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ಸಹ ಸಂಚಾಲಕರುಗಳಾದ ನವೀನ್, ಭಾಗೀರಥಿ, ಕಾವೇರಿ, ನಾಗೇಶ್, ಜಮುನಾ, ಚಂದ್ರನ್, ಮುತ್ತ, ಪಂಕಜ, ಗೀತಾ ಸೇರಿದಂತೆ ಸಮಿತಿಯ ಪದಾಧಿಕಾರಿಗಳು ಭಾಗವಹಿಸಿದ್ದರು.ಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಬೆಲೆ ಏರಿಕೆ ಆಧಾರದಲ್ಲಿನ ತುಟ್ಟಿ ಭತ್ಯೆಯೊಂದಿಗೆ ಎಲ್ಲಾ ವಿಭಾಗಗಳ ಕಾರ್ಮಿಕರಿಗೂ ಸಾಮಾನ್ಯ ಕನಿಷ್ಟ ವೇತನ ಜಾರಿಯಾಗಬೇಕು. ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ವಾರ್ಷಿಕ ೨೦೦ ದಿನಗಳ ಕೆಲಸ ಹಾಗೂ ದಿನಕ್ಕೆ ೭೦೦ ರೂ.ವೇತನ ನೀಡಬೇಕು. ಎಲ್ಲಾ ಜಿಲ್ಲೆಗಳಲ್ಲೂ ಕಾರ್ಮಿಕ ನ್ಯಾಯಾಲಯಗಳನ್ನು ಸ್ಥಾಪಿಸಬೇಕು. ಇದರೊಂದಿಗೆ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ೩೦ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ಸಹ ಸಂಚಾಲಕರುಗಳಾದ ನವೀನ್, ಭಾಗೀರಥಿ, ಕಾವೇರಿ, ನಾಗೇಶ್, ಜಮುನಾ, ಚಂದ್ರನ್, ಮುತ್ತ, ಪಂಕಜ, ಗೀತಾ ಸೇರಿದಂತೆ ಸಮಿತಿಯ ಪದಾಧಿಕಾರಿಗಳು ಭಾಗವಹಿಸಿದ್ದರು.