ಸೋಮವಾರಪೇಟೆ, ಫೆ.೨೩: ಕುಶಾಲನಗರದ ೨೨೦ ಕೆವಿ ವಿದ್ಯುತ್ ಸ್ವೀಕರಣ ಕೇಂದ್ರದ ವಿದ್ಯುತ್ ಉಪಕರಣಗಳು ಮತ್ತು ಟವರ್ಗಳಿಗೆ ಬಣ್ಣ ಬಳಿಯುವ ಕಾಮಗಾರಿ ನಡೆಯುವುದರಿಂದಾಗಿ ತಾ. ೨೪, ೨೫ ಮತ್ತು ೨೬ರಂದು ಕುಶಾಲನಗರ-ಸೋಮವಾರಪೇಟೆ ವಿದ್ಯುತ್ ಪ್ರಸರಣ ಮಾರ್ಗದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಧನಂಜಯ್ ತಿಳಿಸಿದ್ದಾರೆ.
ಈ ಮೂರು ದಿನಗಳು ಸೋಮವಾರಪೇಟೆ ಪಟ್ಟಣ ವ್ಯಾಪ್ತಿ, ಚೌಡ್ಲು, ಹಾನಗಲ್ಲು, ದೊಡ್ಡಮಳ್ತೆ, ಐಗೂರು, ಅಬ್ಬೂರುಕಟ್ಟೆ, ಶಾಂತಳ್ಳಿ, ಕಿರಗಂದೂರು, ಬೆಟ್ಟದಳ್ಳಿ, ತೋಳೂರುಶೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೆಳಿಗ್ಗೆ ೧೧ ರಿಂದ ಮಧ್ಯಾಹ್ನ ೧ ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.