ಉಪಾಧ್ಯಕ್ಷ ಸ್ಥಾನಕ್ಕೆ ಅರವಿಂದ ಲಿಂಬಾವಳಿ ರಾಜೀನಾಮೆ

ಬೆಂಗಳೂರು, ಫೆ. ೨೩: ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಅರವಿಂದ ಲಿಂಬಾವಳಿ ಭಾರತೀಯ ಜನತಾ ಪಕ್ಷದ ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಒಬ್ಬ ವ್ಯಕ್ತಿ ಒಂದು ಹುದ್ದೆ" ಎಂಬ ನಿಯಮಕ್ಕೆ ಅನ್ವಯ ತಾವು ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಲಿಂಬಾವಳಿ ಹೇಳಿದ್ದಾರೆ. ಅರವಿಂದ ಲಿಂಬಾವಳಿ ತಮ್ಮ ರಾಜೀನಾಮೆ ಪತ್ರವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಸಲ್ಲಿಸಿದ್ದಾರೆ. ಇದೇ ವೇಳೆ ತಾವು ಉಪಾಧ್ಯಕ್ಷರಾಗಿದ್ದ ಸಮಯದಲ್ಲಿ ತಮಗೆ ಸಹಕಾರ ನೀಡಿದವರಿಗೆ ಲಿಂಬಾವಳಿ ಧನ್ಯವಾದ ಹೇಳಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಸ್ಫೋಟಕಗಳ ಸಂಗ್ರಹ ಇತ್ತು: ನಿರಾಣಿ

ಚಿಕ್ಕಬಳ್ಳಾಪುರ, ಫೆ. ೨೩: ಶಿವಮೊಗ್ಗ ಸ್ಫೋಟ ಘಟನೆಗೂ ಮುಂಚೆಯಿAದಲೂ ಚಿಕ್ಕಬಳ್ಳಾಪುರ ಘಟನೆಯ ಸ್ಪೋಟಕಗಳನ್ನು ಸಂಗ್ರಹಿಸಿಡಲಾಗಿತ್ತು ಎಂದು ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವ ಮುರುಗೇಶ್ ನಿರಾಣಿ ಮಂಗಳವಾರ ಹೇಳಿದ್ದಾರೆ. ಶಿವಮೊಗ್ಗ ಸ್ಫೋಟಕ್ಕೂ ಮುಂಚೆಯಿAದಲೂ ಸ್ಫೋಟಕಗಳನ್ನು ಸಂಗ್ರಹಿಸಿಟ್ಟಿದ್ದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಗಣಿಗಾರಿಕೆ ಚಟುವಟಿಕೆಯಲ್ಲಿ ತೊಡಗಿರುವ ಜನರು, ಸ್ಫೋಟಕಗಳನ್ನು ಎಚ್ಚರಿಕೆಯಿಂದ ನಿರ್ವಹಿಸಬೇಕಾದ ಬಗ್ಗೆ ತರಬೇತಿ ನೀಡಬೇಕಿದೆ ಎಂದು ಅವರು ತಿಳಿಸಿದ್ದಾರೆ. ಗಣಿ ಶಾಲೆ ತೆರೆಯಲು ಸರ್ಕಾರ ಯೋಜನೆ ಹಾಕಿಕೊಂಡಿದೆ ಮತ್ತು ಗಣಿಗಾರಿಕೆ ಪ್ರದೇಶದಲ್ಲಿ ಜನರಿಗೆ ಸುರಕ್ಷತೆ ಒದಗಿಸಲು ಸರ್ಕಾರ ಬದ್ಧವಾಗಿದೆ. ಅಕ್ರಮ, ಕಾನೂನು ಬಾಹಿರ ಗಣಿಗಾರಿಕೆ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ನಿರಾಣಿ ಎಚ್ಚರಿಕೆ ನೀಡಿದ್ದಾರೆ.

ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ ಪ್ರಕರಣ: ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

ಚಿಕ್ಕಬಳ್ಳಾಪುರ, ಫೆ. ೨೩: ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬAಧಿಸಿದAತೆ ಚಿಕ್ಕಬಳ್ಳಾಪುರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವಲ್ಲಿ ಗ್ರಾಮದ ಬಳಿ ಜಿಲೆಟಿನ್ ಸ್ಫೋಟದಿಂದ ಆರು ಮಂದಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬAಧಿಸಿದAತೆ ಈಗಾಗಲೇ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಸಚಿವರು, ತನಿಖೆ ವಿಚಾರವಾಗಿ ಘಟನಾ ಸ್ಥಳದಿಂದಲೇ ಮುಖ್ಯಮಂತ್ರಿ ಜೊತೆ ದೂರವಾಣಿ ಮೂಲಕ ಮಾತನಾಡಿದ್ದಾನೆ. ಕಾನೂನು ಉಲ್ಲಂಘಿಸಿ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕ ಗಡಿಯಲ್ಲಿ ನಿರ್ಬಂಧ: ಮಧ್ಯ ಪ್ರವೇಶಿಸುವಂತೆ ಪ್ರಧಾನಿಗೆ ಕೇರಳ ಸಿಎಂ ಪತ್ರ

ತಿರುವನಂತಪುರA, ಫೆ. ೨೩: ದೇವರನಾಡಿನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಕೇರಳ ಗಡಿಯಲ್ಲಿ ನಿರ್ಬಂಧಗಳನ್ನು ವಿಧಿಸಿರುವ ಕರ್ನಾಟಕದ ವಿರುದ್ಧ ಕೇರಳ ಸರ್ಕಾರ ಕೇಂದ್ರಕ್ಕೆ ದೂರು ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯ ಪ್ರವೇಶಿಸಬೇಕು ಎಂದು ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಅವರು ಒತ್ತಾಯಿಸಿದ್ದಾರೆ. ಈ ಸಂಬAಧ ಪ್ರಧಾನಿ ಮೋದಿಗೆ ಪತ್ರ ಬರೆದಿರುವ ಕೇರಳ ಸಿಎಂ, ಅಂತರಾಜ್ಯ ಗಡಿ ಬಂದ್ ಮಾಡುವುದು ಮತ್ತು ನಿರ್ಬಂಧ ವಿಧಿಸುವುದು ಕೇಂದ್ರ ಸರ್ಕಾರದ ಮಾರ್ಗಸೂಚಿಗಳಿಗೆ ವಿರುದ್ಧವಾಗಿದೆ. ಅಂತರಾಜ್ಯ ಪ್ರಯಾಣಕ್ಕೆ ಯಾವುದೇ ರಾಜ್ಯ ನಿರ್ಬಂಧ ಹೇರುವಂತಿಲ್ಲ ಎಂದು ಹೇಳಿದ್ದಾರೆ. ನೆರೆಯ ರಾಜ್ಯಕ್ಕೆ ಪ್ರಯಾಣಿಸುವಾಗ ಜನರು ಎದುರಿಸುತ್ತಿರುವ ಕಷ್ಟಗಳನ್ನು ಪರಿಹರಿಸಲು ಪ್ರಧಾನಿ ಮೋದಿ ತುರ್ತು ಮಧ್ಯ ಪ್ರವೇಶಿಸಬೇಕು. ಯಾವುದೇ ರಾಜ್ಯಗಳು ಅಂತರರಾಜ್ಯ ಪ್ರಯಾಣವನ್ನು ತಡೆಯಬಾರದು ಎಂಬ ಕೇಂದ್ರ ಸರ್ಕಾರದ ಸೂಚನೆಗೆ ವಿರುದ್ಧವಾಗಿ ಈ ನಿರ್ಬಂಧಗಳಿವೆ ಎಂದು ಪಿಣರಾಯಿ ದೂರಿದ್ದಾರೆ. ಕರ್ನಾಟಕದ ನಿರ್ಬಂಧಗಳಿAದಾಗಿ ಅಗತ್ಯ ಸರಕುಗಳನ್ನು ಸಾಗಿಸುವ ಟ್ರಕ್‌ಗಳು, ವಿದ್ಯಾರ್ಥಿಗಳು, ವೈದ್ಯಕೀಯ ಚಿಕಿತ್ಸೆಗಾಗಿ ಹೋಗುವ ರೋಗಿಗಳು ಸೇರಿದಂತೆ ಅನೇಕ ಜನರು ರಾಜ್ಯದ ಗಡಿಯಲ್ಲಿ ಅನಗತ್ಯ ತೊಂದರೆಗಳನ್ನು ಅನುಭವಿಸುತ್ತಿದ್ದಾರೆ. ಅಂತರರಾಜ್ಯ ಸಂಚಾರಕ್ಕೆ ನಿರ್ಬಂಧ ಹೇರುವುದು ಭಾರತ ಸರ್ಕಾರದ ಸೂಚನೆಗೆ ವಿರುದ್ಧವಾಗಿದೆ ಎಂದು ಕೇರಳ ಸಿಎಂ ದೂರಿದ್ದಾರೆ.