ಮಡಿಕೇರಿ, ಫೆ. ೨೩ : ವೀರಾಜಪೇಟೆ-ಬೈಂದೂರು ರಸ್ತೆಯ ಕಿ.ಮೀ ೨೮.೯೦ ರಿಂದ ೨೯.೫೩ರ ವರೆಗೆ ಆಯ್ದ ಭಾಗಗಳಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ಕಾಂಕ್ರೀಟಿಕರಣ ಕಾಮಗಾರಿಯನ್ನು ಕೈಗೊಳ್ಳುವ ನಿಟ್ಟಿನಲ್ಲಿ ಪ್ರಯಾಣಿಕರ ಮತ್ತು ಸಾರ್ವಜನಿಕರ ಸಂಚಾರದ ಹಿತದೃಷ್ಟಿಯಿಂದ ದಂಡ ಪ್ರಕ್ರಿಯಾ ಸಂಹಿತೆ ೧೯೭೩ರ ಸೆಕ್ಷನ್ ೧೪೪, ಡಿಸಾಸ್ಟರ್ ಮ್ಯಾನೇಜ್‌ಮೆಂಟ್ ಆಕ್ಟ್ ೨೦೦೫ರ ಕಲಂ ೩೩, ೩೪(ಬಿ),(ಸಿ),(ಡಿ) ಮತ್ತು ಮೋಟಾರು ವಾಹನ ಕಾಯ್ದೆ ೧೯೮೮ರ ಕಲಂ ೧೧೫ ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮ ೧೯೮೯ರ (ತಿದ್ದುಪಡಿ ನಿಯಮಾವಳಿ ೧೯೯೦) ನಿಯಮ ೨೨೧ಎ(೫)ರಲ್ಲಿ ಪçದತ್ತವಾದ ಅಧಿಕಾರದಂತೆ ಮಡಿಕೇರಿಯಿಂದ ಮೇಕೇರಿ ವರೆಗಿನ ರಸ್ತೆಯಲ್ಲಿ ತಾ. ೨೫ ರಿಂದ ಮಾರ್ಚ್ ೨೫ ರವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಜಿಲ್ಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಚಾರುಲತಾ ಸೋಮಲ್ ಅವರು ಆದೇಶ ಹೊರಡಿಸಿದ್ದಾರೆ.

ಸಾರ್ವಜನಿಕರು ಬದಲಿ ರಸ್ತೆಯಾದ ಮಡಿಕೇರಿ-ತಾಳತ್ತಮನೆ-ಮೇಕೇರಿ ಮಾರ್ಗವನ್ನು ಬಳಸುವುದು. ಈ ಬಗ್ಗೆ ಮೋಟಾರ್ ವಾಹನ ಕಾಯ್ದೆ ೧೯೮೮ರ ಸೆಕ್ಷನ್ ೧೧೬ ಹಾಗೂ ಕರ್ನಾಟಕ ಮೋಟಾರ್ ವಾಹನ ನಿಯಮ ೧೯೮೯ರ (ತಿದ್ದುಪಡಿ ನಿಯಮ ೧೯೯೦) ನಿಯಮ ೨೨೧ಎ (೨)ರಂತೆ ಅವಶ್ಯವಿರುವ ಸಂಜ್ಞೆ / ಸೂಚನಾ ಫಲಕವನ್ನು ಅಳವಡಿಸಲು ಜಿಲÁ್ಲ ಪೊಲೀಸ್ ಅದಿsÃಕ್ಷಕರು, ಕೊಡಗು ಜಿಲ್ಲೆ, ಮಡಿಕೇರಿ ಹಾಗೂ ಕಾರ್ಯಪಾಲಕ ಇಂಜಿನಿಯರ್, ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ, ಕೊಡಗು ವಿಭಾಗ, ಮಡಿಕೇರಿ ಇವರಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅವರು ತಿಳಿಸಿದ್ದಾರೆ.