ಕೂಡಿಗೆ, ಫೆ. ೨೩: ಕೂಡಿಗೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವತಿಯಿಂದ ಶಾಲಾಭಿವೃದ್ಧಿ ಸಮಿತಿಯವರಿಗೆ ಒಂದು ದಿನದ ತರಬೇತಿ ಕಾರ್ಯಾಗಾರ ಶಾಲಾ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ವೆಂಕಟೇಶ ನೆರವೇರಿಸಿ ಮಾತನಾಡಿ, ಶಾಲಾಭಿವೃದ್ಧಿ ಸಮಿತಿಯವರು ಶಾಲೆಯ ಪ್ರಗತಿ ಬಗ್ಗೆ ಹೆಚ್ಚು ಕಾಳಜಿ ವಹಿಸುವ ಮತ್ತು ಅಭಿವೃದ್ಧಿಪಡಿಸಲು ಬೇಕಾಗುವ ವಿಷಯದ ಬಗ್ಗೆ ವಿದ್ಯಾರ್ಥಿಗಳಿಗೆ ಶಾಲೆಯ ಅಭಿವೃದ್ಧಿಗೆ ದಾನಿಗಳಿಂದ ಸಹಕಾರ ಪಡೆದು ಶಾಲೆಯ ಪ್ರಗತಿಗೆ ಪೂರಕವಾಗುವ ಅಂಶಗಳ ಬಗ್ಗೆ ಸಮಿತಿಯ ಜವಾಬ್ದಾರಿಯ ವಿಷಯಗಳನ್ನು ತಿಳಿಸಿದರು.

ಸಭೆಯ ಅಧ್ಯಕ್ಷತೆಯನ್ನು ಸಮಿತಿಯ ಅಧ್ಯಕ್ಷೆ ಅನುಸೂಯ ವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕಿ ಸಣ್ಣಕ್ಕ, ಸಂಪನ್ಮೂಲ ವ್ಯಕ್ತಿ ದಯಾನಂದ, ಮುಬೀನ್ ಕಾಸರ್ ಮತ್ತು ಶಿಕ್ಷಕಿಯರಾದ ವಿಜಯಲಕ್ಷಿö್ಮ, ಕೆ.ವಿ. ಕಮಲ, ರಂಜಿನಿ ಸೇರಿದಂತೆ ಸಮಿತಿಯ ಸದಸ್ಯರು ಹಾಜರಿದ್ದರು.