ಮಡಿಕೇರಿ, ಫೆ.೨೪: ವೀರಾಜಪೇಟೆ ಪಟ್ಟಣ ವ್ಯಾಪ್ತಿಯಲ್ಲಿ ಬಿ.ಶೆಟ್ಟಿಗೇರಿ, ಫೀಡರ್‌ನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ನಡೆಸ ಬೇಕಿರುವ ಹಿನ್ನೆಲೆ ತಾ. ೨೬ ರಂದು ಬೆಳಗ್ಗೆ ೧೦ ಗಂಟೆಯಿAದ ಸಂಜೆ ೫ ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸ ಲಾಗುವುದು. ಬಿಟ್ಟಂಗಾಲ, ನಾಂಗಾಲ, ರುದ್ರಗುಪ್ಪೆ, ಬಿ.ಶೆಟ್ಟಿಗೇರಿ, ಕುಟ್ಟಂದಿ, ವಿ. ಬಾಡಗ, ಹಾಗೂ ಸುತ್ತಮುತ್ತ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿ ಯರ್ ಅವರು ಕೋರಿದ್ದಾರೆ.