ಮಡಿಕೇರಿ, ಫೆ. ೨೪: ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಕೊಡಗು ಜಿಲ್ಲೆಯಲ್ಲಿ ತಾ. ೨೮ ರಂದು ನಡೆಯಲಿರುವ ಕರ್ನಾಟಕ ಭವನ, ದೆಹಲಿಯ ಉಳಿಕೆ ಮೂಲ ವೃಂದದ ಮತ್ತು ಹೈದರಾಬಾದ್ ಕರ್ನಾಟಕ ವೃಂದದ ಸಹಾಯಕರು/ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿ ಪರೀಕ್ಷೆಗಳನ್ನು ಯಾವುದೇ ಅವ್ಯವಹಾರಗಳಿಲ್ಲದಂತೆ ಸುಗಮವಾಗಿ ನಡೆಸುವ ಸಲುವಾಗಿ ದಂಡ ಪ್ರಕ್ರಿಯಾ ಸಂಹಿತೆ ೧೯೭೩ರ ಕಲಂ ೧೪೪ ರಡಿ ದತ್ತವಾದ ಅಧಿಕಾರದಂತೆ ಕೊಡಗು ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಚಾರುಲತ ಸೋಮಲ್ ಅವರು ಮಡಿಕೇರಿ ೪ ಪರೀಕ್ಷಾ ಕೇಂದçಗಳ ಸುತ್ತಲಿನ ೨೦೦ ಮೀಟರ್ ವ್ಯಾಪ್ತಿಯಲ್ಲಿನ ಪçದೇಶವನ್ನು ನಿರ್ಬಂಧಿತ ಸ್ಥಳ ಎಂದು ಘೋಷಿಸಿ ಆದೇಶಿಸಿದ್ದಾರೆ.

ಈ ಆದೇಶವು ಪರೀಕ್ಷಾ ದಿನಗಳಂದು ಬೆಳಿಗ್ಗೆ ೯ ರಿಂದ ಸಂಜೆ ೪ ಗಂಟೆಯವರೆಗೆ ಮಾತ್ರ ಚಾಲ್ತಿಯಲ್ಲಿರುತ್ತದೆ. ಈ ಅವಧಿಯಲ್ಲಿ ಪರೀಕ್ಷಾ ಕೇಂದ್ರಕ್ಕೆ ಮೊಬೈಲ್ ಹಾಗೂ ಸ್ಮಾರ್ಟ್ ಫೋನ್, ಸ್ಮಾರ್ಟ್ ವಾಚ್, ಬ್ಲೂಟೂತ್ ಡಿವೈಸ್, ಪೇಜರ್, ವೈರ್‌ಲೆಸ್, ಕ್ಯಾಲ್ಕೂಲೇಟರ್ ಮುಂತಾದ ಎಲೆಕ್ಟಾçನಿಕ್ ಉಪಕರಣ ಮತ್ತು ಮೈಕ್ರೋಫೋನ್, ಸ್ಲೆöÊಡ್ ರೂಲ್‌ಗಳು, ಮಾರ್ಕರ್‌ಗಳು, ಲಾಗ್ ಟೇಬಲ್‌ಗಳು, ವೈಟ್ ಫ್ಲೂಯಿಡ್, ಬ್ಲೇಡ್, ಎರೇಸರ್ ಮತ್ತಿತರವನ್ನು ತೆಗೆದುಕೊಂಡು ಹೋಗುವಂತಿಲ್ಲ.

ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಮಾಡಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು, ಇನ್ನಾವುದೇ ವಸ್ತುಗಳನ್ನು ಹಂಚುವುದು/ ರವಾನಿಸುವುದು ಮತ್ತಿತರ ಚಟುವಟಿಕೆಗಳನ್ನು ಸಂಪೂರ್ಣ ನಿಷೇಧಿಸಿದೆ.

ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಲಾಗಿದೆ.

ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬAಧಿಸಿದ ಯಾವುದೇ ವಿಷಯಗಳನ್ನು/ ಮಾಹಿತಿಯನ್ನು ರವಾನಿಸುವ, ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದು ಮುಂತಾದ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚೆಯಿAದ ಪರೀಕ್ಷಾ ಅವಧಿಯವರೆಗೆ ಪರೀಕ್ಷಾ ಕೇಂದ್ರಗಳ ೨೦೦ ಮೀಟರ್ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು ಕಾರ್ಯ ನಿರ್ವಹಿಸುವುದನ್ನು ಮತ್ತು ಈ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಕೆಯನ್ನು ನಿಷೇಧಿಸಿದೆ. ಸರ್ಕಾರದ ಕೋವಿಡ್-೧೯ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಚಾರುಲತ ಸೋಮಲ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.