ಮಡಿಕೇರಿ, ಫೆ. ೨೪: ಇಂಧನ ಬೆಲೆ ಏರಿಕೆ ಹಾಗೂ ವಾಹನಗಳ ಬಿಡಿಭಾಗಗಳ ಬೆಲೆ ಏರಿಕೆಯನ್ನು ಖಂಡಿಸಿ ಮಡಿಕೇರಿ ನಗರ ಟ್ಯಾಕ್ಸಿ ಚಾಲಕರ ಸಂಘದ ವತಿಯಿಂದ ತಾ. ೨೬ ರಂದು ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಿಗ್ಗೆ ೯.೩೦ ಗಂಟೆಗೆ ಎಲ್ಲಾ ಟ್ಯಾಕ್ಸಿ ಚಾಲಕರು ನಗರ ಹಳೆ ಖಾಸಗಿ ಬಸ್ ನಿಲ್ದಾಣದಲ್ಲಿ ಸಮಾವೇಶಗೊಂಡು ಮೆರವಣಿಗೆ ಮೂಲಕ ಜ. ತಿಮ್ಮಯ್ಯ ವೃತ್ತಕ್ಕೆ ತೆರಳಿ ಅಲ್ಲಿ ಪ್ರತಿಭಟನೆ ನಡೆಸಲಾಗುವದು. ನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಗುವದೆಂದು ಸಂಘದ ಅಧ್ಯಕ್ಷ ತೆಕ್ಕಡ ಸಂತು ಕಾರ್ಯಪ್ಪ ತಿಳಿಸಿದ್ದಾರೆ.