ಮಡಿಕೇರಿ, ಫೆ. ೨೪: ಜಿಲ್ಲೆಯಲ್ಲಿನ ರಾಜ್ಯ ಹೆದ್ದಾರಿಗಳಲ್ಲಿ ಮತ್ತು ಮುಖ್ಯ ರಸ್ತೆಗಳಲ್ಲಿ ಸೇರುವ ಕೂಡು ರಸ್ತೆಗಳ ಬಳಿ, ಜಂಕ್ಷನ್, ಜನಸಂದಣಿ ಇರುವ ಸ್ಥಳಗಳಾದ ಶಾಲಾ ಕಾಲೇಜು, ಆಸ್ಪತ್ರೆ ಸೇರಿದಂತೆ ಇನ್ನಿತರ ಸ್ಥಳಗಳಲ್ಲಿ ರಸ್ತೆ ಉಬ್ಬುಗಳ ಬದಲಾಗಿ ಇತರ ವೇಗ ನಿಯಂತ್ರಣ ಕ್ರಮಗಳನ್ನು ವೈಜ್ಞಾನಿಕವಾಗಿ ಅನುಷ್ಠಾನ ಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಚಾರುಲತ ಸೋಮಲ್ ಸಲಹೆ ಮಾಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಮಡಿಕೇರಿ, ವೀರಾಜಪೇಟೆ ಮತ್ತು ಕುಶಾಲನಗರ ನಗರಗಳಲ್ಲಿ ನಗರ ಸಾರಿಗೆ ವಾಹನಗಳ ಬಸ್ ನಿಲ್ದಾಣ ಹಾಗೂ ಬಸ್ ಶೆಲ್ಟರ್‌ಗಳ ನಿಲುಗಡೆ, ನಿಲುಗಡೇತರ ಸ್ಥಳ, ನಿರ್ದಿಷ್ಟ ಸ್ಥಳಗಳಲ್ಲಿ ಆಟೋ ರಿಕ್ಷಾ ನಿಲುಗಡೆಗೆ ಸಂಬAಧಿಸಿದ ಅಧಿಸೂಚನೆಗಳನ್ನು ಕೂಡಲೇ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳನ್ನು ಒಳಗೊಂಡ ಉಪ ಸಮಿತಿಯನ್ನು ರಚಿಸಿ ವರದಿ ನೀಡುವಂತೆ ಸೂಚನೆ ನೀಡಿದರು.ಗೌರವಾನ್ವಿತ ರಾಷ್ಟçಪತಿ ಆಗಮಿಸಿದ ಸಂದರ್ಭದಲ್ಲಿ ನಗರದ ರಸ್ತೆಗಳಿಗೆ ಅಳವಡಿಸಿದ್ದ ಸ್ಪೀಡ್ ಬ್ರೇಕರ್‌ಗಳನ್ನು ತೆಗೆಯಲಾಗಿತ್ತು, ಅವುಗಳನ್ನು ಪುನಃ ಅಳವಡಿಸುವಂತೆ ನಗರಸಭೆಗೆ ನಿರ್ದೇಶನ ನೀಡಿದರು.

ನಗರದ ನೂತನ ಖಾಸಗಿ ಬಸ್ ನಿಲ್ದಾಣದಲ್ಲಿ

(ಮೊದಲ ಪುಟದಿಂದ) ಮೂಲ ಸೌಕರ್ಯ ಇಲ್ಲದಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿದ್ದು, ಮೂಲ ಸೌಕರ್ಯಗಳನ್ನು ಒದಗಿಸಲು ಕ್ರಮವಹಿಸುವಂತೆ ಹಾಗೂ ಬಸ್ ನಿಲ್ದಾಣದಲ್ಲಿ ಸ್ವಚ್ಛತೆಯನ್ನು ಕಾಪಾಡುವಂತೆ ನಗರಸಭೆಗೆ ಸೂಚಿಸಿದರು.

ಮಾಂದಲ್ ಪಟ್ಟಿ ರಸ್ತೆ ದುರಸ್ತಿಗೆ ಸಂಬAಧಿಸಿದAತೆ ಸಂಬAಧಿಸಿದ ಇಲಾಖೆಗೆ ಪರಿಶೀಲಿಸಿ ವರದಿ ನೀಡುವಂತೆ ನಿರ್ದೇಶನ ನೀಡಿದರು.

ದುಬಾರೆಯಲ್ಲಿ ವಾಹನ ನಿಲುಗಡೆ ಪ್ರದೇಶದಲ್ಲಿ ಸರಿಯಾದ ನಿರ್ವಹಣೆ ಮಾಡುತ್ತಿಲ್ಲ ಎಂಬ ದೂರುಗಳು ಬರುತ್ತಿದ್ದು, ಪರಿಶೀಲಿಸಿ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಜನರು ಓಡಾಡಲು ರಸ್ತೆಯಲ್ಲಿ ಜೀಬ್ರಾ ಲೈನ್ ಹಾಕಬೇಕು ಹಾಗೂ ವೃತ್ತ ಬಳಿ ಸ್ಪೀಡ್ ಬ್ರೇಕರ್ ಅಳವಡಿಸಲು ಕ್ರಮವಹಿಸುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ ಅವರು ಮಾತನಾಡಿ; ಬೋಯಿಕೇರಿ, ನಿಸರ್ಗಧಾಮ ಸೇರಿದಂತೆ ಹಲವು ಕಡೆಗಳಲ್ಲಿ ಬ್ಲ್ಯಾಕ್ ಸ್ಪಾಟ್ ಸರಿಪಡಿಸಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಪ್ರಾದೇಶಿಕ ಸಾರಿಗೆ ಅಧಿಕಾರಿ ವಿನಯಾ ಅವರು ರಸ್ತೆ ದುರಸ್ತಿ, ಜಂಕ್ಷನ್‌ಗಳಲ್ಲಿ ಸಿಗ್ನಲ್ ಅಳವಡಿಸುವ, ಹೆಚ್ಚು ಅಪಘಾತವಾಗುವ ಸ್ಥಳಗಳನ್ನು ಗುರುತಿಸಿ ಬೋರ್ಡ್ಗಳನ್ನು ಅಳವಡಿಸುವ ಹಾಗೂ ವೇಗ ವಲಯದ ಹಾಗೂ ಮಾಂದಲ್ ಪಟ್ಟಿಗೆ ಹೋಗುವ ರಸ್ತೆಯನ್ನು ದುರಸ್ತಿ ಪಡಿಸುವ ಬಗ್ಗೆ ಸಭೆಗೆ ಮಾಹಿತಿ ನೀಡಿದರು.

ನಗರಸಭೆ ಪೌರಾಯುಕ್ತ ಎಸ್.ವಿ. ರಾಮದಾಸ್ ಅವರು ನೂತನವಾಗಿ ನಿರ್ಮಿಸಿರುವ ಖಾಸಗಿ ಬಸ್ ನಿಲ್ದಾಣದಲ್ಲಿ ಮಳೆಗಾಲದಲ್ಲಿ ನೀರು ಬರುತ್ತದೆ ಎಂದು ಮಾಹಿತಿ ನೀಡಿದರು. ಉಪ ವಿಭಾಗಾಧಿಕಾರಿ ಈಶ್ವರ ಕುಮಾರ್, ಡಿವೈಎಸ್ಪಿ ದಿನೇಶ್ ಕುಮಾರ್, ಕೆಎಸ್‌ಆರ್‌ಟಿಸಿ ಮಡಿಕೇರಿ ಘಟಕ ವ್ಯವಸ್ಥಾಪಕಿ ಗೀತಾ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪಿ.ಎಸ್. ಮಚ್ಚಾಡೋ, ರೀಟಾ ಇತರರು ಇದ್ದರು.