ಮಡಿಕೇರಿ, ಫೆ. ೨೫: ಮಡಿಕೇರಿಯ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ದಂಡಿನ ಮಾರಿಯಮ್ಮ ದೇವಿಯು ಸುಮಾರು ೯೦೦ ವರ್ಷಗಳ ಹಿಂದೆ ರಾಜರ ಆಳ್ವಿಕೆ ಕಾಲದಲ್ಲಿ ಪ್ರತಿಷ್ಠಾಪಿಸಲ್ಪಟ್ಟ ದೇವಿಯಾಗಿದ್ದು, ಅಲ್ಲಿಂದ ಇಲ್ಲಿಯವರೆಗೂ ಭಕ್ತಾದಿಗಳಿಂದ ಪೂಜಿಸಲ್ಪಡುತ್ತಾ ಬಂದಿದೆ. ಇದರ ಅಂಗವಾಗಿ ಮಡಿಕೇರಿ ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ದಂಡಿನ ಮಾರಿಯಮ್ಮ ದೇವಿಯು ತನ್ನದೆ ಆದ ವೈಶಿಷ್ಟö್ಯವನ್ನು ಹೊಂದಿದ್ದು, ಶ್ರೀ ದೇವಿಯ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವದ ಅಂಗವಾಗಿ ತಾ. ೨೬ ಮತ್ತು ೨೭ ರಂದು ಪೂಜಾ ಕಾರ್ಯ ಜರುಗಲಿದೆ.
ತಾ. ೨೬ ಸಂಜೆ ೫ ಗಂಟೆಯಿAದ ಪ್ರಸಾದ ಸಿದ್ಧಿ ರಕ್ಷೆÆÃಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜೆ, ವಿಷ್ಣು ಪೂಜೆ, ದಿಶಾ ಬಳಿ (ದಿಕ್ಪಾಲಕ ಬಲಿ), ಮಹಾ ಮಂಗಳಾರತಿ, ತೀರ್ಥಪ್ರಸಾದ ವಿನಿಯೋಗವಿರುತ್ತದೆ. ತಾ. ೨೭ ರಂದು ಬೆಳಿಗ್ಗೆ ೮ ಗಂಟೆಯಿAದ ಗಣಪತಿ ಹೋಮ, ಕಲಶ ಪೂಜೆ, ಕಲಶಾಭಿಷೇಕ, ನಾಗದೇವರಿಗೆ ಪಂಚಾಮೃತಾಭಿಷೇಕ, ನಾಗಪೂಜೆ, ದೇವಿಗೆ ಅಲಂಕಾರ ಪೂಜೆ. ಮಧ್ಯಾಹ್ನ ೧೨ ಗಂಟೆಗೆ ಮಹಾಪೂಜೆ ನಂತರ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ನಡೆಯಲಿದೆ ಎಂದು ಆಡಳಿತ ಮಂಡಳಿ ಅಧ್ಯಕ್ಷ ಕೆ.ವಿ. ಸುಬ್ರಮಣಿ ಅವರು ತಿಳಿಸಿದ್ದಾರೆ.