ಕುಶಾಲನಗರ, ಫೆ ೨೫: ಕುಶಾಲನಗರದ ಶ್ರೀ ಬಲಮುರಿ ಸಿದ್ಧಿವಿನಾಯಕ ದೇವಸ್ಥಾನದ ೨೩ನೇ ವಾರ್ಷಿಕೋತ್ಸವ ಪೂಜಾ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ನೆರವೇರಿತು.

ಎರಡು ದಿನಗಳ ಕಾಲ ದೇವಾಲಯದಲ್ಲಿ ವಿವಿಧ ಪೂಜಾ ವಿಧಿಗಳು ಪ್ರಧಾನ ಅರ್ಚಕ ಪ್ರಕಾಶ್ ಮತ್ತು ಚಿಂತಾಮಣಿ ಭಟ್ ಅವರ ನೇತೃತ್ವದಲ್ಲಿ ನೆರವೇರಿದವು.

ವಾರ್ಷಿಕೋತ್ಸವ ಅಂಗವಾಗಿ ದೇವಾಲಯದಲ್ಲಿ ವಾಸ್ತುಪೂಜೆ, ಮಹಾಗಣಪತಿ ಹೋಮ, ನವಗ್ರಹ ಹೋಮ, ದಿಗ್ಭಂಧನ, ನೂತನ ಧ್ವಜಸ್ತಂಭ ನಿರ್ಮಾಣ ಪೂಜೆ ನೆರ ವೇರಿಸಲಾಯಿತು. ಮಧ್ಯಾಹ್ನ ಮಹಾ ಮಂಗಳಾರತಿ ಬಳಿಕ ನೆರೆದಿದ್ದ ಮತ್ತು ಚಿಂತಾಮಣಿ ಭಟ್ ಅವರ ನೇತೃತ್ವದಲ್ಲಿ ನೆರವೇರಿದವು.

ವಾರ್ಷಿಕೋತ್ಸವ ಅಂಗವಾಗಿ ದೇವಾಲಯದಲ್ಲಿ ವಾಸ್ತುಪೂಜೆ, ಮಹಾಗಣಪತಿ ಹೋಮ, ನವಗ್ರಹ ಹೋಮ, ದಿಗ್ಭಂಧನ, ನೂತನ ಧ್ವಜಸ್ತಂಭ ನಿರ್ಮಾಣ ಪೂಜೆ ನೆರ ವೇರಿಸಲಾಯಿತು. ಮಧ್ಯಾಹ್ನ ಮಹಾ ಮಂಗಳಾರತಿ ಬಳಿಕ ನೆರೆದಿದ್ದ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು. ದೇವಸ್ಥಾನ ಸೇವಾ ಸಮಿತಿಯ ಅಧ್ಯಕ್ಷ ಡಿ.ಜೆ. ರೇಣು ಕುಮಾರ್, ಗೌರವಾಧ್ಯಕ್ಷ ಯು.ಟಿ. ರಾಮಯ್ಯ, ಉಪಾಧ್ಯಕ್ಷ ಜಿ.ಶಿವರಾಂ, ಖಜಾಂಚಿ ರಾಮ ಕೃಷ್ಣಾಚಾರ್, ಕಾರ್ಯದರ್ಶಿ ಗೋವಿಂದರಾಜು ಸೇರಿದಂತೆ ಸಮಿತಿ ನಿರ್ದೇಶಕರು, ಸದಸ್ಯರು ಇದ್ದರು.