ಪಂಚ ವಿಧಾನಸಭೆಗಳಿಗೆ ಚುನಾವಣೆ ಘೋಷಣೆ

ನವದೆಹಲಿ, ಫೆ. ೨೬: ಭಾರತದ ಚುನಾವಣಾ ಆಯೋಗವು ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ಚುನಾವಣಾ ದಿನಾಂಕಗಳನ್ನು ಪ್ರಕಟಿಸಿದೆ. ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳ ಚುನಾವಣಾ ದಿನಾಂಕಗಳನ್ನು ಪ್ರಕಟಿಸಿದೆ. ಮಾರ್ಚ್ ೨೭ ರಂದು ಮತದಾನ ನಡೆಯಲಿದ್ದು, ಮೇ ೨ ರಂದು ಪಂಚ ರಾಜ್ಯಗಳ ಚುನಾವಣೆಗೆ ಮತ ಎಣಿಕೆ ಕಾರ್ಯ ನಡೆಯಲಿದೆ. ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಅರೋರಾ ಈ ಘೋಷಣೆ ಮಾಡಿದ್ದಾರೆ. ಈ ಬಾರಿ ಶೇ. ೩೦ ಮತಗಟ್ಟೆಗಳನ್ನು ಹೆಚ್ಚಳ ಮಾಡಲಾಗಿದೆ. ಕೊರೊನಾ ಕಾರಣದಿಂದಾಗಿ ಮತದಾನದಂದು ನೂಕು ನುಗ್ಗಲು ತಪ್ಪಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಕೊರೊನಾ ಕಾರಣಕ್ಕಾಗಿ ಮತದಾನದ ಕಾಲವನ್ನು ಒಂದು ಗಂಟೆ ಹೆಚ್ಚುವರಿ ಸಮಯಾವಕಾಶ ನೀಡಲಾಗಿದೆ. ೮೨೪ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಸಲಾಗುತ್ತಿದೆ. ಈ ಚುನಾವಣೆಯಲ್ಲಿ ೧೮.೬೮ ಕೋಟಿ ಮತದಾರರು ಭಾಗವಹಿಸಲಿದ್ದಾರೆ. ೨.೭ ಲಕ್ಷ ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. ಅಸ್ಸಾಂ - ೧೨೬, ತಮಿಳುನಾಡು - ೨೩೪, ಪಶ್ಚಿಮ ಬಂಗಾಳ - ೨೯೪, ಕೇರಳ -೧೪೦ ಹಾಗೂ ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿ- ೩೦ ಸ್ಥಾನಗಳಿಗೆ ಚುನಾವಣೆ ನಡೆಸಲಾಗುತ್ತಿದೆ ಎಂದರು.

ಹೆಚ್ಚುವರಿ ನೀರನ್ನು ತಮಿಳುನಾಡಿನ ಯೋಜನೆಗಳಿಗೆ ಬಳಸಲು ಅವಕಾಶ ಕೊಡಬೇಡಿ

ಬೆಂಗಳೂರು, ಫೆ. ೨೬: ವೆಲ್ಲಾರು- ವೈಗೈ ಮತ್ತು ಗುಂಡಾರು ನದಿಗಳನ್ನು ಕಾವೇರಿಯೊಂದಿಗೆ ಜೋಡಿಸುವುದರೊಂದಿಗೆ ಕಾವೇರಿ ಹೆಚ್ಚುವರಿ ನೀರನ್ನು ಬಳಸಿಕೊಳ್ಳಲು ತಮಿಳುನಾಡಿಗೆ ಅವಕಾಶ ನೀಡುವುದಿಲ್ಲ ಎಂದು ಕರ್ನಾಟಕ ಸರ್ಕಾರ ಪುನರುಚ್ಚರಿಸಿದೆ. ಈ ಯೋಜನೆಯನ್ನು ತಮಿಳುನಾಡು ಸರ್ಕಾರ ಮುಂದುವರೆಸಲು ಅವಕಾಶ ನೀಡಬಾರದು ಎಂದು ಒತ್ತಾಯಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ, ಶುಕ್ರವಾರ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವಡ್ಗಿ ಸೇರಿದಂತೆ ಹಿರಿಯ ಅಧಿಕಾರಿಗಳು, ತಜ್ಞರೊಂದಿಗೆ ಸಭೆಯೊಂದನ್ನು ನಡೆಸಿದ್ದು, ಅಂತರ ರಾಜ್ಯ ನದಿ ವಿವಾದ ಕುರಿತಂತೆ ಚರ್ಚೆ ನಡೆಸಿದ್ದಾರೆ. ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ಕಾವೇರಿಯ ೪೫ ಟಿಎಂಸಿ ಹೆಚ್ಚುವರಿ ನೀರನ್ನು ತಮಿಳುನಾಡಿನ ಯೋಜನೆಗಳಿಗೆ ಬಳಸಿಕೊಳ್ಳಲು ಕರ್ನಾಟಕ ಅವಕಾಶ ಮಾಡುವುದಿಲ್ಲ. ಇದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುವುದು. ಹೆಚ್ಚುವರಿ ನೀರು ಉಭಯ ರಾಜ್ಯಗಳ ನಡುವೆ ಹಂಚಿಕೆಯಾಗಿಲ್ಲ. ಇದು ಆಗುವ ಮುನ್ನವೇ ಕರ್ನಾಟಕದ ಹಿತಾಸಕ್ತಿಯ ವಿರುದ್ಧವಾಗಿ ತಮಿಳುನಾಡು ಸರ್ಕಾರ ಯೋಜನೆಗೆ ಚಾಲನೆ ನೀಡಿದೆ ಎಂದರು. ಎಲ್ಲಾ ಅಂತರ-ರಾಜ್ಯ ನದಿ ನೀರಿನ ವಿವಾದಗಳಲ್ಲಿ ರಾಜ್ಯ ಹಿತಾಸಕ್ತಿಯನ್ನು ರಕ್ಷಿಸಲು ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಿದೆ. ಮಹದಾಯಿ ನದಿ ನೀರು ಯೋಜನೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಸಚಿವರು ಮತ್ತು ಅಧಿಕಾರಿಗಳು ಚರ್ಚೆ ನಡೆಸಿದ್ದಾರೆ. ಕರ್ನಾಟಕ, ಮಹಾರಾಷ್ಟç ಮತ್ತು ಗೋವಾ ಜಂಟಿಯಾಗಿ ಯೋಜನೆಯ ಸ್ಥಳ ಪರಿಶೀಲಿಸುವಂತೆ ಸುಪ್ರೀಂಕೋರ್ಟ್ ಇತ್ತೀಚೆಗೆ ಆದೇಶ ನೀಡಿದೆ ಎಂದು ಅವರು ತಿಳಿಸಿದರು.

ಭಾರತ-ಚೀನಾ ನಡುವೆ ಹಾಟ್‌ಲೈನ್ ಸಂಪರ್ಕ ಸ್ಥಾಪನೆ

ನವದೆಹಲಿ, ಫೆ. ೨೬: ಚೀನಾ ಮತ್ತು ಭಾರತದ ನಡುವೆ ಸಮಯೋಚಿತ ಅಭಿಪ್ರಾಯ ವಿನಿಮಯಕ್ಕಾಗಿ ಹಾಟ್‌ಲೈನ್ ಸಂಪರ್ಕ ಬೆಳೆಸಲು ಉಭಯ ದೇಶಗಳ ವಿದೇಶಾಂಗ ಸಚಿವರು ಸಮ್ಮತಿ ಸೂಚಿಸಿದ್ದಾರೆ ಎಂದು ಚೀನಾದ ಸರ್ಕಾರಿ ಸುದ್ದಿ ಸಂಸ್ಥೆ ವರದಿ ಮಾಡಿದೆ. ಉಭಯ ರಾಷ್ಟçಗಳ ವಿದೇಶಾಂಗ ಸಚಿವರುಗಳಾದ ವಾಂಗ್ ಯಿ ಮತ್ತು ಎಸ್. ಜೈಶಂಕರ್ ನಡುವೆ ನಡೆದ ದೂರವಾಣಿ ಸಂಭಾಷಣೆಯ ನಂತರ, ನೆರೆಹೊರೆಯ ಗಡಿ ಸಮಸ್ಯೆಯನ್ನು ಸೂಕ್ತವಾಗಿ ನಿಭಾಯಿಸಬೇಕಿದೆ. ಇಲ್ಲದಿದ್ದಲ್ಲಿ, ದ್ವಿಪಕ್ಷೀಯ ಸಂಬAಧಗಳು ಹದಗೆಡುತ್ತದೆ ಎಂಬುದನ್ನು ಉಭಯ ನಾಯಕರು ಒಪ್ಪಿಕೊಂಡರು ಎನ್ನಲಾಗಿದೆ. ಗಡಿ ವಿವಾದಗಳು ವಸ್ತುನಿಷ್ಠ ವಾಸ್ತವವಾಗಿದ್ದು, ಅದನ್ನು ಗಂಭೀರವಾಗಿ ಪರಿಗಣಿಸಬೇಕು. ಅಭಿವೃದ್ಧಿಯ ನಿಟ್ಟಿನಲ್ಲಿಎರಡು ಪ್ರಮುಖ ಉದಯೋನ್ಮುಖ ಆರ್ಥಿಕತೆಗಳು ಒಟ್ಟಾಗಿ ಕೆಲಸ ಮಾಡುತ್ತವೆ ಮತ್ತು ದ್ವಿಪಕ್ಷೀಯ ಸಂಬAಧಗಳನ್ನು ಮತ್ತಷ್ಟು ಸುಧಾರಿಸಲು ಮತ್ತು ಪ್ರಾಯೋಗಿಕ ಸಹಕಾರವನ್ನು ಉತ್ತೇಜಿಸಲು ಉಭಯ ರಾಷ್ಟçಗಳು ಮುಂದಾಗಲು ನಿಶ್ಚಯಿಸಿವೆ. ಚೀನಾ-ಭಾರತ ಗಡಿ ಪ್ರದೇಶಗಳಲ್ಲಿನ ಕಳೆದ ವರ್ಷದ ಪರಿಸ್ಥಿತಿಯ ಹಕ್ಕುಗಳು ಮತ್ತು ತಪ್ಪುಗಳು ಬಹಳ ಸ್ಪಷ್ಟವಾಗಿವೆ ಮತ್ತು ಹಿಂದಿನಿAದ ಆಳವಾದ ಪಾಠಗಳನ್ನು ಕಲಿಯಬೇಕು. ಎರಡೂ ಕಡೆಯವರು ಪರಸ್ಪರ ನಂಬಿಕೆ ಮತ್ತು ಸಹಕಾರದ ಸರಿಯಾದ ಮಾರ್ಗವನ್ನು ಅನುಸರಿಸಬೇಕು ಮತ್ತು ಅನುಮಾನ ಮತ್ತು ಅಪನಂಬಿಕೆಯೊAದಿಗೆ ದಾರಿ ತಪ್ಪಬಾರದು ಎಂಬ ವಿಷಯದ ಕುರಿತು ಚರ್ಚಿಸಲಾಯಿತು ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ.