ನಾಪೋಕ್ಲು, ಫೆ. ೨೭: ಕಕ್ಕಬ್ಬೆ ಸಮೀಪದ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ವ್ಯವಸ್ಥಾಪನಾ ಸಮಿತಿಯಿಂದ ನೂತನವಾಗಿ ಸುಮಾರು ೨೩.೨೦ ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಪೌಳಿಯನ್ನು ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ಬಾಚಮಂಡ ಲವ ಚಿಣ್ಣಪ್ಪ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ದೇವಾಲಯಕ್ಕೆ ನೂತನ ಪೌಳಿಯ ನಿರ್ಮಾಣ ನಾಡಿನ ಜನರ ಸಹಕಾರದಿಂದ ಸಾಧ್ಯವಾಗಿದೆ ಎಂದರು. ದೇವಾಲಯದ ಅರ್ಚಕ ಕುಶ ಭಟ್ ಪೂಜೆ ನೆರವೇರಿಸಿದರು.

ಈ ಸಂದರ್ಭ ಭಕ್ತ ಜನ ಸಂಘದ ಅಧ್ಯಕ್ಷ ಕಾಂಡAಡ ಜೋಯಪ್ಪ, ಉಪಾಧ್ಯಕ್ಷ ಪರದಂಡ ಡಾಲಿ, ಪಾಂಡAಡ ನರೇಶ್, ಇಗ್ಗುತ್ತಪ್ಪ ದೇವಾಲಯದ ಸಮಿತಿಯರು, ಸಿಬ್ಬಂದಿ ಮತ್ತಿತರರು ಇದ್ದರು.