ಮಡಿಕೇರಿ, ಫೆ. ೨೭: ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಾ.೧ ರಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯ ಸಂಘದ ಮಡಿಕೇರಿ ತಾಲೂಕು ಅಧ್ಯಕ್ಷೆ ಕೆ.ಎಸ್ ಮುತ್ತಮ್ಮ ತಿಳಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂಗನವಾಡಿ ಮಡಿಕೇರಿ, ಫೆ. ೨೭: ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಾ.೧ ರಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯ ಸಂಘದ ಮಡಿಕೇರಿ ತಾಲೂಕು ಅಧ್ಯಕ್ಷೆ ಕೆ.ಎಸ್ ಮುತ್ತಮ್ಮ ತಿಳಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂಗನವಾಡಿ ಮಾಡುವ ಬಗ್ಗೆ ಘೋಷಿಸಿದ್ದು, ಅದನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ನಿವೃತ್ತ ಅಂಗನವಾಡಿ ಕಾರ್ಯ ಕರ್ತೆ ಕೆ.ಎ. ಕಸ್ತೂರಿ ಮಾತನಾಡಿ, ರಾಜ್ಯದಲ್ಲಿ ನಿವೃತ್ತಿಯಾದ ಹಾಗೂ ನಿವೃತ್ತಿಯಾಗುತ್ತಿರುವ ಅಂಗನವಾಡಿ ಸಿಬ್ಬಂದಿಗಳು ಕಳೆದ ೩೫ ವರ್ಷಗಳಿಂದ ನಿರಂತರವಾಗಿ ಸೇವೆ ಸಲ್ಲಿಸಿ ಇಂದು ಬೀದಿ ಪಾಲಾಗಿದ್ದಾರೆ. ಈ ಹಿಂದೆ ಅಂಗನವಾಡಿ ಕಾರ್ಯಕರ್ತೆಯರಿಗೆ ರೂ. ೫೦ ಸಾವಿರ ಹಾಗೂ ಸಹಾಯಕಿ ಯರಿಗೆ ರೂ. ೩೦ ಸಾವಿರ ಹಿಡಿಗಂಟು ನೀಡಲಾಗುತ್ತಿತ್ತು. ಅದನ್ನು ಹಿಂದಿನ ಸರ್ಕಾರ ಸ್ಥಗಿತಗೊಳಿಸಿದ್ದು, ಕೂಡಲೇ ಹಿಡಿಗಂಟು ಹಾಗೂ ನಿವೃತ್ತಿ ವೇತನ ನೀಡಬೇಕು ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮಹಾಮಂಡಳಿಯ ಪದಾಧಿಕಾರಿ ಕೆ.ಕೆ. ಶಾ

ರದ, ನಾಗರತ್ನ, ಕಾರ್ಯದರ್ಶಿ ಐ.ಎ. ಅಕ್ಕಮ್ಮ ಹಾಜರಿದ್ದರು.