ವೀರಾಜಪೇಟೆ, ಫೆ. ೨೭: ಅನುಸೂಚಿತ ಜಾತಿ ಪಂಗಡಗಳ (ದೌರ್ಜನ್ಯ ನಿಯಂತ್ರಣ) ಜಿಲ್ಲಾ ಜಾಗೃತಿ ಸಮಿತಿಯ ಸಭೆಯು ಮಡಿಕೇರಿಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಾರ್ಚ್ ೧ರಂದು ನಡೆಯಲಿದ್ದು, ಸಭೆಯಲ್ಲಿ ಭಾಗವಹಿಸಬೇಕಾಗಿರುವುದರಿಂದ ಅಂದು ವೀರಾಜಪೇಟೆ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಮುಖ್ಯಾಧಿಕಾರಿ ಲಭ್ಯವಿರುವುದಿಲ್ಲ ಎಂದು ಪಟ್ಟಣ ಪಂಚಾಯಿತಿ ಪ್ರಕಟಣೆ ತಿಳಿಸಿದೆ.