ಕೂಡಿಗೆ, ಫೆ. ೨೭: ಮುಳ್ಳುಸೋಗೆ ಗ್ರಾಮ ಪಂಚಾಯಿತಿಯಲ್ಲಿ ಈಗಾಗಲೇ ನೂತನವಾಗಿ ೨೦ ಲಕ್ಷ ರೂ. ಹಣದಲ್ಲಿ ಸ್ವಚ್ಛ ಭಾರತ ಯೋಜನೆಯಡಿಯಲ್ಲಿ ಸುಸಜ್ಜಿತ ಕಟ್ಟಡವನ್ನು ನಿರ್ಮಾಣ ಮಾಡಿ ಮುಳ್ಳುಸೋಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರತಿ ಮನೆ ಮನೆಯಿಂದ ಕಸವನ್ನು ಸಂಗ್ರಹಣೆ ಮಾಡಿ ವೈಜ್ಞಾನಿಕವಾಗಿ ವಿಂಗಡಣೆ ಮಾಡುವ ಮೂಲಕ ರಾಜ್ಯಕ್ಕೆ ಮಾದರಿ ಯಾಗಿರುವ ಮುಳ್ಳುಸೋಗೆ ಕಸ ವಿಲೇವಾರಿ ಘಟಕಕ್ಕೆ ಭಾರತ ಸರ್ಕಾರದ ಪಂಚಾಯಿತಿ ರಾಜ್ ಸಚಿವಾಲಯದ ಕಾರ್ಯದರ್ಶಿ ಸುನೀಲ್ ಕುಮಾರ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ತಂಡದ ಜೊತೆಯಲ್ಲಿ ಕರ್ನಾಟಕ ಸರಕಾರದ ಸ್ವಚ್ಛ ಭಾರತ ಯೋಜನೆಯ ಪ್ರಧಾನ ಕಾರ್ಯದರ್ಶಿಗಳಾದ ಉಮಮಹಾ ದೇವಿನ್ ಮತ್ತು ಪ್ರಿಯಾಂಕಾ ಮೇರಿ ಪ್ರಸೀಸ್ , ರಾಜ್ಯದ ಗ್ರಾಮೀಣ ಯೋಜನೆಯಡಿಯಲ್ಲಿ ಸುಸಜ್ಜಿತ ಕಟ್ಟಡವನ್ನು ನಿರ್ಮಾಣ ಮಾಡಿ ಮುಳ್ಳುಸೋಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರತಿ ಮನೆ ಮನೆಯಿಂದ ಕಸವನ್ನು ಸಂಗ್ರಹಣೆ ಮಾಡಿ ವೈಜ್ಞಾನಿಕವಾಗಿ ವಿಂಗಡಣೆ ಮಾಡುವ ಮೂಲಕ ರಾಜ್ಯಕ್ಕೆ ಮಾದರಿ ಯಾಗಿರುವ ಮುಳ್ಳುಸೋಗೆ ಕಸ ವಿಲೇವಾರಿ ಘಟಕಕ್ಕೆ ಭಾರತ ಸರ್ಕಾರದ ಪಂಚಾಯಿತಿ ರಾಜ್ ಸಚಿವಾಲಯದ ಕಾರ್ಯದರ್ಶಿ ಸುನೀಲ್ ಕುಮಾರ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ತಂಡದ ಜೊತೆಯಲ್ಲಿ ಕರ್ನಾಟಕ ಸರಕಾರದ ಸ್ವಚ್ಛ ಭಾರತ ಯೋಜನೆಯ ಪ್ರಧಾನ ಕಾರ್ಯದರ್ಶಿಗಳಾದ ಉಮಮಹಾ ದೇವಿನ್ ಮತ್ತು ಪ್ರಿಯಾಂಕಾ ಮೇರಿ ಪ್ರಸೀಸ್ , ರಾಜ್ಯದ ಗ್ರಾಮೀಣ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಭಂವರ್ ಸಿಂಗ್ ಮೀನಾ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಜಯಣ್ಣ, ಜಿಲ್ಲಾ ಪಂಚಾಯತ್ ಸದಸ್ಯೆ ಮಂಜುಳ, ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಚೆÀಲುವರಾಜ್, ಉಪಾಧ್ಯಕ್ಷೆ ಜಯಮ್ಮ ಮತ್ತು ಸರ್ವ ಸದಸ್ಯರು, ವಿವಿಧ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳು ಮತ್ತು ಜಿಲ್ಲಾ ಸ್ವಚ್ಛ ಭಾರತ ಯೋಜನೆಯ ಅಧಿಕಾರಿ ಗಳಾದ ಪೆಮ್ಮಯ್ಯ, ರಾಜೇಶ್ ಮತ್ತಿತರರು ಇದ್ದರು.