ಸೋಮವಾರಪೇಟೆ, ಫೆ. ೨೮: ದೀರ್ಘಕಾಲದ ಹೋರಾಟದ ಮೂಲಕ ಪಡೆದುಕೊಂಡಿದ್ದ ಕಾರ್ಮಿಕ ಕಾನೂನುಗಳನ್ನು ಕೇಂದ್ರ ಸರ್ಕಾರ ಕಿತ್ತುಕೊಂಡಿದ್ದು, ಇನ್ನು ಮುಂದೆ ಕಾರ್ಮಿಕರು ರಾಜಕೀಯ ಅಧಿಕಾರ ಹೊಂದಿದರೆ ಮಾತ್ರ ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಸಾಧ್ಯವಿದೆ ಎಂದು ಎ.ಐ.ಟಿ.ಯು.ಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎ.ಡಿ. ವಿಜಯಭಾಸ್ಕರ್ ಅಭಿಪ್ರಾಯಿಸಿದರು.
ಇಲ್ಲಿನ ಮಾನಸಹಾಲ್ನಲ್ಲಿ ನಡೆದ ಯುನೈಟೆಡ್ ಪ್ಲಾಂಟೇಷನ್ ವಕರ್ಸ್ ಯೂನಿಯನ್ನ ೧೦ನೇ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕೋವಿಡ್-೧೯ ಲಾಕ್ಡೌನ್ ಸಂದರ್ಭ ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದಿದೆ. ಇಂತಹ ಅವೈಜ್ಞಾನಿಕ ನೀತಿಯಿಂದ ವಲಸೆ ಕಾರ್ಮಿಕರು ನಡೆದುಕೊಂಡು ಹೋಗುವಾಗಲೇ ಹಸಿವಿನಿಂದ ಪ್ರಾಣಬಿಟ್ಟಿದ್ದಾರೆ. ರೈತರು, ಕಾರ್ಮಿಕರು ಕಟ್ಟಿದ ಭಾರತವನ್ನು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ, ಅದಾನಿ, ಅಂಬಾನಿಗೆ ಮಾರಾಟ ಮಾಡಲು ಹೊರಟಿದೆ ಎಂದು ಆರೋಪಿಸಿದರು.
ಕೇಂದ್ರ ಸರ್ಕಾರದ ಜನವಿರೋಧಿ, ರೈತ ವಿರೋಧಿ, ಕಾರ್ಮಿಕ ವಿರೋಧಿ ನೀತಿಯಿಂದ ಬೇಸತ್ತ ರೈತರು, ಕಾರ್ಮಿಕರು, ಯುವಜನರು, ಮಹಿಳೆಯರು ಇಂದು ಬೀದಿಗೆ ಸಂದರ್ಭ ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದಿದೆ. ಇಂತಹ ಅವೈಜ್ಞಾನಿಕ ನೀತಿಯಿಂದ ವಲಸೆ ಕಾರ್ಮಿಕರು ನಡೆದುಕೊಂಡು ಹೋಗುವಾಗಲೇ ಹಸಿವಿನಿಂದ ಪ್ರಾಣಬಿಟ್ಟಿದ್ದಾರೆ. ರೈತರು, ಕಾರ್ಮಿಕರು ಕಟ್ಟಿದ ಭಾರತವನ್ನು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ, ಅದಾನಿ, ಅಂಬಾನಿಗೆ ಮಾರಾಟ ಮಾಡಲು ಹೊರಟಿದೆ ಎಂದು ಆರೋಪಿಸಿದರು.
ಕೇಂದ್ರ ಸರ್ಕಾರದ ಜನವಿರೋಧಿ, ರೈತ ವಿರೋಧಿ, ಕಾರ್ಮಿಕ ವಿರೋಧಿ ನೀತಿಯಿಂದ ಬೇಸತ್ತ ರೈತರು, ಕಾರ್ಮಿಕರು, ಯುವಜನರು, ಮಹಿಳೆಯರು ಇಂದು ಬೀದಿಗೆ ಇಳಿದು ಹೋರಾಟ ಮಾಡುತ್ತಿದ್ದಾರೆ. ದೆಹಲಿ ಸೇರಿದಂತೆ ದೇಶದ ಇನ್ನಿತರ ಭಾಗಗಳಲ್ಲಿ ನಡೆಯುತ್ತಿರುವ ರೈತರ ಚಳುವಳಿ ದೇಶದ ಎರಡನೆ ಸ್ವಾತಂತ್ರö್ಯ ಹೋರಾಟ ಎಂದು ವಿಜಯಭಾಸ್ಕರ್ ವಿಶ್ಲೇಷಿಸಿದರು.
ಭಾರತ ಕಮ್ಯೂನಿಸ್ಟ್ ಪಕ್ಷದ ಚಿಕ್ಕಮಗಳೂರು ಜಿಲ್ಲೆಯ ಕಾರ್ಯದರ್ಶಿ ಎಚ್.ಎಂ. ರೇಣುಕಾರಾಧ್ಯ ಮಾತನಾಡಿ, ಕಾಫಿ ತೋಟದ ಕಾರ್ಮಿಕರಿಗೆ ಕನಿಷ್ಟ ಕೂಲಿ ಸಿಗುತ್ತಿಲ್ಲ. ಅಸಂಘಟಿತ ಕಾರ್ಮಿಕರು, ವಲಸೆ ಕಾರ್ಮಿಕರು ಬೀದಿಪಾಲಾಗಿದ್ದಾರೆ. ಭಾರತ ದೇಶದ ಪ್ರಜೆಗಳಾದ ತೋಟ ಕಾರ್ಮಿಕರಿಗೆ, ಅಸಂಘಟಿತ, ವಲಸೆ ಕಾರ್ಮಿಕರಿಗೆ ಆಸ್ತಿಯ ಹಕ್ಕು ಸಿಕ್ಕಿಲ್ಲ. ಇವತ್ತಿಗೂ ಶೇ.೯೦ರಷ್ಟು ಮಂದಿಗೆ ಸ್ವಂತ ನಿವೇಶನಗಳಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಸರ್ಕಾರಿ ಜಾಗದಲ್ಲಿ ತೋಟದ ಕಾರ್ಮಿಕರಿಗೆ ನಿವೇಶನಗಳನ್ನು ನೀಡುತ್ತಿಲ್ಲ. ಕಾರ್ಮಿಕರಿಗೆ ಇದ್ದ ಸೌಲಭ್ಯಗಳನ್ನು ಕಿತ್ತುಕೊಳ್ಳುತ್ತಿದ್ದಾರೆ. ಭಾರತ ಪ್ರಜಾಪ್ರಭುತ್ವ ರಾಷ್ಟçವಾಗಿ ಉಳಿದಿಲ್ಲ. ದೇಶದ ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ಷಾ ಇವರಿಬ್ಬರ ಸರ್ಕಾರವಾಗಿ ಬದಲಾಗಿದೆ. ದೇಶವನ್ನು ಕಾರ್ಪೋರೇಟರ್ಗಳಿಗೆ ಮಾರಾಟ ಮಾಡುತ್ತಿದ್ದಾರೆ. ಸಂವಿಧಾನವನ್ನು ಬದಲಾಯಿಸುವ ತಂತ್ರ ಮಾಡುತ್ತಿದ್ದಾರೆ. ದೇಶದ ರೈತರು, ಕಾರ್ಮಿಕರನ್ನು ನಾಶ ಮಾಡುವ ಕಾಯಿದೆಗಳನ್ನು ಜಾರಿಗೊಳಿಸುತ್ತಿದ್ದಾರೆ ಎಂದು ದೂರಿದರು. ಕಾರ್ಯಕ್ರಮದಲ್ಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳನ್ನು ಗೌರವಿಸಲಾಯಿತು.
ವೇದಿಕೆಯಲ್ಲಿ ಎಐಟಿಯುಸಿ ಜಿಲ್ಲಾಧ್ಯಕ್ಷ ಎಚ್.ಎಂ. ಸೋಮಪ್ಪ, ಭಾರತ ಕಮ್ಯೂನಿಸ್ಟ್ ಪಕ್ಷದ ಕೊಡಗು ಜಿಲ್ಲಾ ಕಾರ್ಯದರ್ಶಿ ಸುನಿಲ್, ಕಾರ್ಮಿಕ ಮುಖಂಡರಾದ ಕೆ. ಗುಣಶೇಖರ್, ಎನ್. ಮಣಿ, ಎಂ.ಸಿ. ಡೊಂಗ್ರೆ, ಎನ್.ಎಲ್. ರಾಧ ಸುಂದರೇಶ್, ಧರ್ಮರಾಜ್, ಪಿ.ಟಿ. ಸುಂದರ ಉಪಸ್ಥಿತರಿದ್ದರು.