ಸ್ಫೋಟಕ ಇಟ್ಟಿದ್ದು ನಾವೇ: ಜೈಶ್-ಉಲ್-ಹಿಂದ್ ಟೆಲಿಗ್ರಾಮ್ ಸಂದೇಶ

ಮುAಬೈ, ಫೆ. ೨೮: ರಿಲಯನ್ಸ್ ದಿಗ್ಗಜ ಮುಖೇಶ್ ಅಂಬಾನಿಯ ನಿವಾಸದ ಸಮೀಪ ಸ್ಫೋಟಕಗಳನ್ನು ಹೊಂದಿರುವ ವಾಹನ ಪತ್ತೆಯಾಗಿದ್ದ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಉದ್ಯಮಿ ಅಂಬಾನಿ ನಿವಾಸದ ಬಳಿ ಸ್ಫೋಟಕಗಳನ್ನು ಇಟ್ಟಿದ್ದ ಬಗ್ಗೆ ಜೈಶ್-ಉಲ್-ಹಿಂದ್ ಉಗ್ರ ಸಂಘಟನೆ ಜವಾಬ್ದಾರಿ ಹೊತ್ತಿದೆ. ಟೆಲಿಗ್ರಾಮ್ ಅಪ್ಲಿಕೇಶನ್‌ನ ಸಂದೇಶದ ಮೂಲಕ ಉಗ್ರ ಸಂಘಟನೆ ಸ್ಫೋಟಕಗಳನ್ನು ಇಟ್ಟಿದ್ದು ನಾವೆಂದು ಘೋಷಿಸಿಕೊಂಡಿದೆ. ಇದು ಕೇವಲ ಟ್ರೇಲರ್, ಬಿಗ್ ಸಿನಿಮಾ ಇನ್ನಷ್ಟೇ ಬರಲಿದೆ ಎಂದು ಸಂದೇಶದಲ್ಲಿ ಹೇಳಲಾಗಿದೆ. ಉದ್ಯಮಿ ಮುಖೇಶ್ ಅಂಬಾನಿಯವರ ದಕ್ಷಿಣ ಮುಂಬೈನಲ್ಲಿರುವ ನಿವಾಸದ ಬಳಿ ಜಿಲೆಟಿನ್ ಕಡ್ಡಿಗಳು, ಸ್ಫೋಟಕ ತುಂಬಿದ್ದ ನಕಲಿ ನಂಬರ್ ಪ್ಲೇಟ್ ಹೊಂದಿರುವ ವಾಹನ ಗುರುವಾರ ಪತ್ತೆಯಾಗಿತ್ತು. ರಿಲಯನ್ಸ್ ಇಂಡಸ್ಟಿçÃಸ್ ಅಧ್ಯಕ್ಷ ಅಂಬಾನಿಯ ಬಹುಮಹಡಿ ನಿವಾಸವಾದ “ಆಂಟಿಲಿಯಾ” ಬಳಿ ವಾಹನವನ್ನು ನಿಲ್ಲಿಸಲಾಗಿತ್ತು. ಜೈಶ್-ಉಲ್-ಹಿಂದ್ ಮುಖೇಶ್ ಅಂಬಾನಿ ಬಳಿ ಬಿಟ್ ಕಾಯಿನ್ ಮೂಲಕ ಹಣಕ್ಕಾಗಿ ಬೇಡಿಕೆ ಇಟ್ಟಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಉಚ್ಚಾಟನೆ

ಹುಬ್ಬಳ್ಳಿ, ಫೆ. ೨೮: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಹೆಸರಲ್ಲಿ ಜನರಿಗೆ ವಂಚನೆ ಮಾಡುತ್ತಿದ್ದ ಹುಬ್ಬಳ್ಳಿ-ಧಾರವಾಡ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪೂರ್ಣಿಮಾ ಸವದತ್ತಿ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಡಿ.ಕೆ. ಶಿವಕುಮಾರ್ ಕಪ್ಪು ಹಣದಿಂದ ಕಡಿಮೆ ಬಡ್ಡಿಯಲ್ಲಿ ಸಾಲ ನೀಡುತ್ತೇನೆ ಎಂದು ಜನರನ್ನು ನಂಬಿಸಿ ಅವರಿಂದ ಹಣ ವಸೂಲಿ ಮಾಡಿದ್ದ ಪೂರ್ಣಿಮಾ ಬಳಿಕ ಪರಾರಿಯಾಗಿದ್ದರು. ತನಗೆ ಹತ್ತು ಸಾವಿರ ರೂಪಾಯಿ ನೀಡಿದರೆ ಸಾಲ ನೀಡುವೆ ಎಂದು ನಂಬಿಸಿ ವಂಚಿಸುತ್ತಿದ್ದ ಪೂರ್ಣಿಮಾ ವಿರುದ್ಧ ಹಲವರು ಪೊಲೀಸರಿಗೆ ದೂರು ಸಲ್ಲಿಸಿದ್ದರು. ಪೂರ್ಣಿಮಾ ಕೇವಲ ಡಿ.ಕೆ.ಶಿ. ಹೆಸರು ಮಾತ್ರವೇ ಅಲ್ಲದೆ ಶಾಸಕರಾದ ಪ್ರಕಾಶ್ ಅಬ್ಬಯ್ಯ ಹೆಸರು ಬಳಸಿ ಸಹ ವಂಚಿಸಿದ್ದರು ಎನ್ನಲಾಗಿದ್ದು, ನಾನು ಕೆಪಿಸಿಸಿ ಕಚೇರಿಯಿಂದ ಕರೆ ಮಾಡಿದ್ದೇನೆ, ನನಗೆ ಹತ್ತು ಸಾವಿರ ನೀಡಿದರೆ ಡಿ.ಕೆ.ಶಿ. ಅವರ ಕಪ್ಪು ಹಣದಿಂದ ನಿಮಗೆ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡುತ್ತೇನೆ ಎಂದು ಪೂರ್ಣಿಮಾ ಜನರಿಗೆ ನಂಬಿಸುತ್ತಿದ್ದರು ಎಂದು ತಿಳಿದುಬಂದಿದೆ.

ದೂರು ದಾಖಲಿಸಲು ಹೈಕೋರ್ಟ್ ನಿರ್ದೇಶನ

ಬೆಂಗಳೂರು, ಫೆ. ೨೮: ಟಿಪ್ಪು ಜಯಂತಿ ವಿಚಾರಕ್ಕೆ ಸಂಬAಧಿಸಿದAತೆ ವಿವಾದಾತ್ಮಕ ಟ್ವೀಟ್ ಮಾಡಿದ್ದ ಬಿಜೆಪಿ ನಾಯಕರಾದ ಸಿ.ಟಿ. ರವಿ ಮತ್ತು ಸಂಸದ ಅನಂತ್‌ಕುಮಾರ್ ಹೆಗಡೆ ಅವರ ವಿರುದ್ಧ ದೂರು ದಾಖಲಿಸಲು ಹೈಕೋರ್ಟ್ ನಿರ್ದೇಶನ ನೀಡಿದೆ. ಟಿಪ್ಪು ಸುಲ್ತಾನ್ ಜಯಂತಿ ಕುರಿತು ವಿವಾದಾತ್ಮಕ ಟ್ವೀಟ್‌ಗಳಿಗೆ ಸಂಬAಧಿಸಿದAತೆ ಸಂಸದ ಅನಂತ್ ಕುಮಾರ್ ಹೆಗಡೆ ಮತ್ತು ಬಿಜೆಪಿ ರಾಷ್ಟಿçÃಯ ಕಾರ್ಯದರ್ಶಿ ಸಿ.ಟಿ. ರವಿ ಅವರ ವಿರುದ್ಧದ ದೂರನ್ನು ಹೊಸದಾಗಿ ಪರಿಗಣಿಸುವಂತೆ ಮ್ಯಾಜಿಸ್ಟೆçÃಟ್ ನ್ಯಾಯಾಲಯಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ೨೦೧೭ರಲ್ಲಿ ರಾಜ್ಯ ಸರ್ಕಾರ ಆಯೋಜಿಸಿದ್ದ ಟಿಪ್ಪು ಜಯಂತಿ ಸಂದರ್ಭದಲ್ಲಿ ಆಚರಣೆಯನ್ನು ಬಹಿಷ್ಕರಿಸುವ ವಿವಾದಾತ್ಮಕ ಟ್ವೀಟ್‌ಗಳನ್ನು ಮಾಡಿದ್ದರು.