ಗೋಣಿಕೊಪ್ಪ ವರದಿ, ಫೆ. ೨೮: ಬೆಂಗಳೂರು ಕೃಷಿ ವಿಶ್ವ ವಿದ್ಯಾಲಯದ ಹಳೆಯ ವಿದ್ಯಾರ್ಥಿ ಸಂಘದ ವತಿಯಿಂದ ಸಕಲವರ ರಾಮಯ್ಯರೆಡ್ಡಿ ಉತ್ತಮ ಕೃಷಿಕ ಪ್ರಶಸ್ತಿಯನ್ನು ನಲ್ಲೂರು ಗ್ರಾಮದ ಪ್ರಗತಿಪರ ರೈತ ಸೋಮೇಂಗಡ ಗಣೇಶ್ ತಿಮ್ಮಯ್ಯ ಅವರಿಗೆ ಪ್ರದಾನ ಮಾಡಲಾಯಿತು.
ಹೆಬ್ಬಾಳದಲ್ಲಿರುವ ಯುಎಎಸ್ ಕನ್ವೆನ್ಷನ್ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಯಿತು. ಈ ಸಂದರ್ಭ ಉಪಮುಖ್ಯಮಂತ್ರಿ ಡಾ. ಅಶ್ವತ್ ನಾರಾಯಣ್, ಸಂಸದ ತೇಜಸ್ವಿ ಸೂರ್ಯ, ಬೆಂಗಳೂರು ಕೃಷಿ ವಿಜ್ಞಾನ ವಿವಿ ಕುಲಪತಿ ಡಾ. ಎಸ್. ರಾಜೇಂದ್ರಪ್ರಸಾದ್, ಡೀನ್ ಡಾ. ಎಲ್. ಸಾವಿತ್ರಮ್ಮ, ಬೆಂಗಳೂರು ಕೃಷಿ ವಿಶ್ವ ವಿದ್ಯಾಲಯದ ಹಳೆಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಡಾ. ಕೆ. ನಾರಾಯಣಗೌಡ ಕಾರ್ಯದರ್ಶಿ ಡಾ. ಕೆ.ಎಂ. ಹರಿಣಿಕುಮಾರ್ ಉಪಸ್ಥಿತರಿದ್ದರು.