ಕುಶಾಲನಗರ, ಫೆ ೨೮: ಕುಶಾಲನಗರ ತಾಲೂಕು ಪ್ರೆಸ್‌ಕ್ಲಬ್ ಉದ್ಘಾಟನಾ ಕಾರ್ಯಕ್ರಮ ತಾ. ೨ ರಂದು ನಡೆಯಲಿದೆ. ಕುಶಾಲನಗರ ವಿವೇಕಾನಂದ ಕಾಲೇಜು ಸಭಾಂಗಣದಲ್ಲಿ ಅಂದು ಬೆಳಗ್ಗೆ ೧೦.೩೦ಕ್ಕೆ ಕಿರಿಕೊಡ್ಲಿ ಮಠಾಧೀಶರಾದ ಶ್ರೀ ಸದಾಶಿವ ಸ್ವಾಮೀಜಿ ದಿವ್ಯ ಸಾನಿಧ್ಯದಲ್ಲಿ ಪ್ರೆಸ್‌ಕ್ಲಬ್‌ನ ಅಧ್ಯಕ್ಷ ಎಂ.ಎನ್. ಚಂದ್ರಮೋಹನ್ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಮುಖ್ಯ ಅತಿಥಿಗಳಾಗಿ ಪ.ಪಂ. ಅಧ್ಯಕ್ಷ ಜೈವರ್ಧನ್, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎಂ.ಎA. ಚರಣ್, ಕೊಡಗು ಪ್ರೆಸ್‌ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷೆ ಸವಿತಾ ರೈ, ವಿವೇಕಾನಂದ ವಿದ್ಯಾಸಂಸ್ಥೆ ಅಧ್ಯಕ್ಷ ಎನ್.ಎನ್. ಶಂಭುಲಿAಗಪ್ಪ ಪಾಲ್ಗೊಳ್ಳುವರು.