ಕರಿಕೆ, ಫೆ. ೨೮: ರಹದಾರಿ ಇಲ್ಲದೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮರ ಮತ್ತು ವಾಹನವನ್ನು ಸಿದ್ದಾಪುರ-ಮಾಲ್ದಾರೆ ರಸ್ತೆಯಲ್ಲಿ ಅರಣ್ಯ ಸಂಚಾರಿ ದಳ ವಶಕ್ಕೆ ಪಡೆದಿದೆ. ಖಚಿತ ಸುಳಿವಿನ

ಮೇರೆಗೆ ಕೊಡಗು ಅರಣ್ಯ ಸಂಚಾರಿ ದಳದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿ.ಜೆ. ಕಾರ್ಯಪ್ಪ ಮಾರ್ಗದರ್ಶನದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನಿವಾಸ್ ನಾಯಕ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ನಿಯಮಬಾಹಿರವಾಗಿ ಸಾಗಾಟ ಮಾಡುತ್ತಿದ್ದ ಐವತ್ತು ಸಾವಿರ ಮೌಲ್ಯದ ನೊಗಮರದ ನಾಟಾಗಳನ್ನು ಮತ್ತು ಕೃತ್ಯಕ್ಕೆ ಬಳಸಿದ ಮಹೀಂದ್ರ ಪಿಕ್‌ಅಪ್ (ಕೆ.ಎ. ೦೩ ಸಿ ೧೧೯೮) ವಾಹನವನ್ನು ಮುಟ್ಟುಗೋಲು ಹಾಕಿಕೊಂಡು ಸಿದ್ದಾಪುರ ನಿವಾಸಿ ಇರ್ಷಾದ್ ಎಂ.ಎA. ಎಂಬಾತನನ್ನು ಬಂಧಿಸಿ ಕಾನೂನು ಕ್ರಮಕೈಗೊಳ್ಳಲಾಗಿದೆ.

ಕಾರ್ಯಾಚರಣೆಯಲ್ಲಿ ಉಪ ವಲಯ ಅರಣ್ಯ ಅಧಿಕಾರಿಗಳಾದ ವಿಕ್ರಮ್, ದಿನೇಶ್, ಚಾಲಕ ಪ್ರವೀಣ್ ಪಾಲ್ಗೊಂಡಿದ್ದರು.