ಮಡಿಕೇರಿ, ಮಾ. ೧: ಹದಗೆಟ್ಟಿರುವ ದೇಚೂರಿನ ರಸ್ತೆಗಳನ್ನು ಶೀಘ್ರ ದುರಸ್ತಿ ಮಾಡಬೇಕು ಎಂದು ದೇಚೂರಿನ ನಿವಾಸಿಗಳು ಪೌರಾಯುಕ್ತರಿಗೆ ಮನವಿ ಮಾಡಿದರು. ಬಹಳ ದಿನಗಳಿಂದ ರಸ್ತೆ ದುಸ್ಥಿತಿಯಲ್ಲಿದ್ದು, ಸಂಚಾರಕ್ಕೆ ಅಯೋಗ್ಯವಾಗಿದೆ. ಆದ್ದರಿಂದ ಶೀಘ್ರದಲ್ಲೇ ರಸ್ತೆ ಸರಿಪಡಿಸುವಂತೆ ಒತ್ತಾಯಿಸಿದರು.
ಮನವಿಗೆ ಸ್ಪಂದಿಸಿದ ಪೌರಾಯುಕ್ತ, ನಗರಸಭೆಯ ಇಂಜಿನಿಯರ್ಗೆ ಸ್ಥಳ ಪರಿಶೀಲನೆ ನಡೆಸಿ ಶೀಘ್ರದಲ್ಲೇ ಸಮಸ್ಯೆಯನ್ನು ಬಗೆಹರಿಸಿಕೊಡುವಂತೆ ಸೂಚಿಸಿದರು.