ಕರಿಕೆ, ಮಾ. ೧: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಇತ್ತೀಚೆಗೆ ಕಾಣಿಸಿಕೊಂಡಿರುವ ಮಾರಕ ಕಾಯಿಲೆಯಾದ ‘ಸಿಕಲ್ ಸೆಲ್’ (ಕುಡುಗೋಲು ಕಾಯಿಲೆ) ಬಗ್ಗೆ ಮಾಹಿತಿ ನೀಡಿ ರಕ್ತ ಪರೀಕ್ಷೆಗೆ ಮಾದರಿ ಸಂಗ್ರಹಿಸಲಾಯಿತು. ಕರಿಕೆ ವ್ಯಾಪ್ತಿಯ ಗಿರಿಜನರಿಗೆ ಕಾಯಿಲೆ ಬಗ್ಗೆ ಆರೋಗ್ಯ ಮಾಹಿತಿ ನೀಡಲಾಯಿತು.
ಕರಿಕೆ ಕಾಲೋನಿ ಶಾಲೆ ಮತ್ತು ಆಶ್ರಮ ಶಾಲೆಗಳ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ರಕ್ತದ ಮಾದರಿ ಸಂಗ್ರಹಿಸಲಾಯಿತು. ಈ ಸಂದರ್ಭದಲ್ಲಿ ಮಡಿಕೇರಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆರೋಗ್ಯ ಕಾರ್ಯಕರ್ತರು, ಸಿಬ್ಬಂದಿ ವರ್ಗ ಹಾಗೂ ಶಿಕ್ಷಕರು ಹಾಜರಿದ್ದರು.