ಕುಶಾಲನಗರ, ಮಾ. ೨: ಬೀಟೆ ಮರದ ನಾಟಾಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಆರೋಪದಡಿ ಓರ್ವ ವ್ಯಕ್ತಿಯನ್ನು ಬಂಧಿಸಿ ಮರದ ಮಿಲ್ ಅನ್ನು ಮುಟ್ಟುಗೋಲು ಹಾಕಿಕೊಂಡಿರುವ ಘಟನೆ ನಡೆದಿದೆ. ಕುಶಾಲನಗರ ತಾಲೂಕು ವ್ಯಾಪ್ತಿಯ ಗುಮ್ಮನಕೊಲ್ಲಿ ಗ್ರಾಮದ ಸೆಲೆಕ್ಟ್ ಮರದ ಮಿಲ್‌ನಲ್ಲಿ ಮರದ ಹೊಟ್ಟಿನಲ್ಲಿ ಬೀಟೆ ಮರದ ೧೪ ನಾಟಗಳು ಸಹಿತ ಬಾಗೆ ಮರದ ೫ ನಾಟಗಳನ್ನು ಅಕ್ರಮವಾಗಿ ಸಂಗ್ರಹಿಸಿಡಲಾಗಿತ್ತು. ಖಚಿತ ಮಾಹಿತಿ ಕುಶಾಲನಗರ, ಮಾ. ೨: ಬೀಟೆ ಮರದ ನಾಟಾಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಆರೋಪದಡಿ ಓರ್ವ ವ್ಯಕ್ತಿಯನ್ನು ಬಂಧಿಸಿ ಮರದ ಮಿಲ್ ಅನ್ನು ಮುಟ್ಟುಗೋಲು ಹಾಕಿಕೊಂಡಿರುವ ಘಟನೆ ನಡೆದಿದೆ. ಕುಶಾಲನಗರ ತಾಲೂಕು ವ್ಯಾಪ್ತಿಯ ಗುಮ್ಮನಕೊಲ್ಲಿ ಗ್ರಾಮದ ಸೆಲೆಕ್ಟ್ ಮರದ ಮಿಲ್‌ನಲ್ಲಿ ಮರದ ಹೊಟ್ಟಿನಲ್ಲಿ ಬೀಟೆ ಮರದ ೧೪ ನಾಟಗಳು ಸಹಿತ ಬಾಗೆ ಮರದ ೫ ನಾಟಗಳನ್ನು ಅಕ್ರಮವಾಗಿ ಸಂಗ್ರಹಿಸಿಡಲಾಗಿತ್ತು. ಖಚಿತ ಮಾಹಿತಿ ನಿಜಾಮುದ್ದಿನ್ (೩೫) ಎಂಬಾತನನ್ನು ಬಂಧಿಸಲಾಗಿದೆ ಎಂದು ಅರಣ್ಯ ವಲಯ ಅಧಿಕಾರಿ ಅನನ್ಯಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಿಲ್ ಅನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಉಪ ವಲಯ ಅರಣ್ಯಾಧಿಕಾರಿ ಕೆ.ವಿ.ಸುಬ್ರಮಣ್ಯ, ಅನಿಲ್ ಡಿಸೋಜ, ಅರಣ್ಯ ರಕ್ಷಕರಾದ

(ಮೊದಲ ಪುಟದಿಂದ) ಮಂಜೇಗೌಡ, ಆನಂದ್ ಮಾಲಗುಂದ, ವೀಕ್ಷಕರಾದ ಮೇದಪ್ಪ, ವಾಹನ ಚಾಲಕ ನಾರಾಯಣ ರೈ, ಆರ್‌ಆರ್‌ಟಿ ಸಿಬ್ಬಂದಿಗಳಾದ ಶಾಂತ, ಪ್ರದೀಪ್, ಸುನಿಲ್, ದಿಲೀಪ್, ರವಿ ಮತ್ತಿತರರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಪ್ರಕರಣಕ್ಕೆ ಸಂಬAಧಿಸಿದAತೆ ಅರಣ್ಯ ಮೊಕದ್ದಮೆ ಕಾಯ್ದೆ ಅನ್ವಯ ಮೊಕದ್ದಮೆ ದಾಖಲಿಸಲಾಗಿದೆ.