ಮಡಿಕೇರಿ, ಮಾ. ೨: ಕುಶಾಲನಗರ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದುಕೊರತೆಗಳನ್ನು ನಿವಾರಿಸಲು ಸಭೆಯು ತಾ. ೩ ರಂದು (ಇಂದು) ಬೆಳಿಗ್ಗೆ ೧೧ ಗಂಟೆಯಿAದ ಮಧ್ಯಾಹ್ನ ೧೨ ಗಂಟೆವರೆಗೆ ಕುಶಾಲನಗರ ಉಪವಿಭಾಗ ಕಚೇರಿ ಆವರಣದಲ್ಲಿ ಮಡಿಕೇರಿ ಸೆಸ್ಕ್ ಕಾರ್ಯನಿರ್ವಾಹಕ ಇಂಜಿನಿಯರ್ (ವಿ) ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಹಾಗೆಯೇ ಸೋಮವಾರಪೇಟೆ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸಲು ಸಭೆಯು ತಾ. ೩ ರಂದು (ಇಂದು) ಮಧ್ಯಾಹ್ನ ೧ ಗಂಟೆಯಿAದ ೨ ಗಂಟೆವರೆಗೆ ಸೋಮವಾರಪೇಟೆ ಉಪವಿಭಾಗ ಕಚೇರಿ ಆವರಣದಲ್ಲಿ ಮಡಿಕೇರಿ ಸೆಸ್ಕ್ ಕಾರ್ಯನಿರ್ವಾಹಕ ಇಂಜಿನಿಯರ್ (ವಿ) ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಸೋಮವಾರಪೇಟೆ ಮತ್ತು ಕುಶಾಲನಗರ ವ್ಯಾಪ್ತಿಯ ಸಾರ್ವಜನಿಕರು, ವಿದ್ಯುತ್ ಗ್ರಾಹಕರ ವಿದ್ಯುಚ್ಛಕ್ತಿಗೆ ಸಂಬAಧಿಸಿದ ಸಮಸ್ಯೆ ಅಥವಾ ದೂರುಗಳು ಇದ್ದಲ್ಲಿ ಈ ಸಭೆಯಲ್ಲಿ ಚರ್ಚಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಈ ಸಭೆಗೆ ಹಾಜರಾಗುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.