ಸೋಮವಾರಪೇಟೆ,ಮಾ.೨: ಕುಶಾಲನಗರದ ೨೨೦ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ವಿದ್ಯುತ್ ಉಪಕರಣಗಳು ಮತ್ತು ಟವರ್‌ಗಳಿಗೆ ಬಣ್ಣ ಬಳಿಯುವ ಕಾರ್ಯ ನಡೆಯುತ್ತಿದ್ದು, ಈ ಹಿನ್ನೆಲೆ ತಾ. ೩ ಮತ್ತು ೪ರಂದು ಕುಶಾಲನಗರ-ಸೋಮವಾರಪೇಟೆ ಮಾರ್ಗದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಇಲಾಖೆಯ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಧನಂಜಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸೋಮವಾರಪೇಟೆ ಪಟ್ಟಣ, ಚೌಡ್ಲು, ಹಾನಗಲ್ಲು, ದೊಡ್ಡಮಳ್ತೆ, ಐಗೂರು, ಶಾಂತಳ್ಳಿ, ಅಬ್ಬೂರುಕಟ್ಟೆ, ಕಿರಗಂದೂರು, ಬೆಟ್ಟದಳ್ಳಿ, ತೋಳೂರುಶೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೆಳಿಗ್ಗೆ ೧೦.೩೦ರಿಂದ ಮಧ್ಯಾಹ್ನ ೧.೩೦ರ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ