ಸುಂಟಿಕೊಪ್ಪ, ಮಾ. ೨: ಒಂದು ಜಿಲ್ಲೆ ಒಂದು ಉತ್ಪನ್ನದ ಯೋಜನೆಯಡಿ ಕಾಫಿ ಉದ್ಯಮ ಸ್ಥಾಪಿಸಲು ಕೃಷಿಕರಿಗೆ ಶೇ. ೩೫ರ ಸಹಾಯಧನದಲ್ಲಿ ಕೇಂದ್ರ ಸರಕಾರ ಅನುದಾನ ಒದಗಿಸಲಿದ್ದು, ಇದರ ಸ್ಥಾಪಿಸಲು ಕೃಷಿಕರಿಗೆ ಶೇ. ೩೫ರ ಸಹಾಯಧನದಲ್ಲಿ ಕೇಂದ್ರ ಸರಕಾರ ಅನುದಾನ ಒದಗಿಸಲಿದ್ದು, ಇದರ ಹಿಂಭಾಗದಲ್ಲಿ ಕೇಂದ್ರ ಸರಕಾರದ ರಾಷ್ಟಿçÃಯ ಕೃಷಿ ವಿಕಾಸ್ ಯೋಜನೆಯಡಿ ರೂ. ೫೦ ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಕೃಷಿ ಸಂಪರ್ಕ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೃಷಿ ಸಮ್ಮಾನ್ ಯೋಜನೆಯಿಂದ ಬಡ ಮಧ್ಯಮ ವರ್ಗದ ರೈತರ ಖಾತೆಗೆ ವಾರ್ಷಿಕವಾಗಿ ೬,೦೦೦ ನಗದು ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಬೆನ್ನೆಲುಬಾದ ಕೃಷಿಕರಿಗೆ ಅನೇಕ ಯೋಜನೆಗಳನ್ನು ರೂಪಿಸಿ ಸಾಕಾರಗೊಳಿಸುತ್ತಿದ್ದಾರೆ. ಉಚಿತ ವಿದ್ಯುತ್,

(ಮೊದಲ ಪುಟದಿಂದ) ಉಚಿತ ಗ್ಯಾಸ್ ಸಿಲಿಂಡರ್‌ನಿAದ ಈಗಾಗಲೇ ಬಡವರ್ಗದವರು ಪ್ರಯೋಜನ ಪಡೆದುಕೊಂಡಿದ್ದು, ಜಲ ಜೀವನ್ ಮಿಷನ್ ಯೋಜನೆಯಿಂದ ಪ್ರತಿಯೊಬ್ಬರ ಮನೆಗೆ ನಲ್ಲಿ ಅಳವಡಿಸಿ ನೀರು ಒದಗಿಸುವ ಮಹಾತ್ವಾಕಾಂಕ್ಷೆ ಯೋಜನೆ ಕಾರ್ಯಗತವಾಗುತ್ತಿದೆ. ಸುದೀರ್ಘ ಅವಧಿಯಲ್ಲಿ ಕೇಂದ್ರದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್ ಸರಕಾರ ಇಂತಹ ಯೋಜನೆ ಜಾರಿಗೆ ತಂದಿದೆಯೇ ಎಂದು ಪ್ರಶ್ನಿಸಿದರು.

ಉಚಿತ ವಿದ್ಯುತ್: ಅಧ್ಯಕ್ಷತೆ ವಹಿಸಿದ್ದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಮಾತನಾಡಿ; ಕೊಡಗು ಜಿಲ್ಲೆಗೆ ೫ ರೈತ ಸಂಪರ್ಕ ಕೇಂದ್ರ ನೀಡಿದ್ದು, ಇದರಿಂದ ರೈತರ ಕೃಷಿ ಚಟುವಟಿಕೆಗೆ ಸಹಕಾರಿಯಾಗಲಿದೆ. ಕೃಷಿ ಉಪಕರಣಗಳನ್ನು ಸಹಾಯಧನದಲ್ಲಿ ಕೃಷಿಕರಿಗೆ ಸರಕಾರ ಒದಗಿಸುತ್ತಿದೆ. ಮುಂದಿನ ಬಜೆಟ್‌ನಲ್ಲಿ ಕೃಷಿಕರಿಗೆ ೧೦ ಹೆಚ್.ಪಿ.ವರೆಗಿನ ಪಂಪ್‌ಸೆಟ್‌ಗೆ ಉಚಿತ ವಿದ್ಯುತ್ ಒದಗಿಸಲು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದೇನೆ. ಸಕಾರಾತ್ಮಕ ಸ್ಪಂದನ ಲಭಿಸಿದೆ ಎಂದು ಹೇಳಿದರು.

ವೇದಿಕೆಯಲ್ಲಿ ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಜಿ.ಪಂ. ಸದಸ್ಯರುಗಳಾದ ಕೆ.ಪಿ. ಚಂದ್ರಕಲಾ, ಪಿ.ಎಂ. ಲತೀಫ್, ಸದಸ್ಯೆ ಕುಮುದ ಧರ್ಮಪ್ಪ, ತಾ.ಪಂ. ಉಪಾಧ್ಯಕ್ಷ ಎಂ.ಬಿ. ಅಭಿಮನ್ಯು ಕುಮಾರ್, ತಾ.ಪಂ. ಸದಸ್ಯ ಬಲ್ಲಾರಂಡ ಮಣಿ ಉತ್ತಪ್ಪ, ಓಡಿಯಪ್ಪನ ವಿಮಲಾವತಿ, ಹೆಚ್.ಡಿ. ಮಣಿ, ಗ್ರಾ.ಪಂ.ಅಧ್ಯಕ್ಷೆ ಶಿವಮ್ಮ ಹಾಗೂ ಗ್ರಾ.ಪಂ.ಉಪಾಧ್ಯಕ್ಷ ಪ್ರಸಾದ್ ಕುಟ್ಟಪ್ಪ ಉಪಸ್ಥಿತರಿದ್ದರು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಬಾನ ಎಂ. ಶೇಕ್ ಪ್ರಾಸ್ತಾವಿಕವಾಗಿ ಮಾತನಾಡಿ ಇಲಾಖೆಯ ವಿವಿಧ ಸೌಲಭ್ಯಗಳು ಹಾಗೂ ಹಣ್ಣು ಶೈಥ್ಯಾಗ್ರಹ ಸ್ಥಾಪಿಸಲಾಗುವುದು ಸೇರಿದಂತೆ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.