ಮಡಿಕೇರಿ, ಮಾ. ೨: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಮಾರ್ಚ್, ೩೧ ರಂದು ಜನರಲ್ ತಿಮ್ಮಯ್ಯ ಅವರ ಜನ್ಮ ದಿನಾಚರಣೆ ಕಾರ್ಯಕ್ರಮದ ಪ್ರಯುಕ್ತ ತಾ. ೧೨ ರಂದು ಬೆಳಗ್ಗೆ ೧೧ ಗಂಟೆಯಿAದ ಮಧ್ಯಾಹ್ನ ೧೨ ಗಂಟೆಯವರೆಗೆ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಕಚೇರಿಯಲ್ಲಿ ಪ್ರಬಂಧ ಸ್ಪರ್ಧೆ (ಸಮರ ವೀರ ಜನರಲ್ ತಿಮ್ಮಯ್ಯ ಅಯಿಂಗಡ ವ್ಯಕ್ತಿತ್ವ ಮತ್ತು ಭಾರತ ದೇಶಕ್ ಅಯಿಂಗಡ ಕೊಡುಗೆ) ಮತ್ತು ಚಿತ್ರಕಲೆ ಸ್ಪರ್ಧೆ (ಜನರಲ್ ತಿಮ್ಮಯ್ಯ ಅವರ ಭಾವಚಿತ್ರ) ನಡೆಯಲಿದೆ.
ಈ ಸ್ಪರ್ಧೆಗಳನ್ನು ಜಿಲ್ಲಾ ಮಟ್ಟದ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ (೮ ರಿಂದ ೧೦ ನೇ ತರಗತಿಯವರೆಗೆ) ಹಮ್ಮಿಕೊಳ್ಳಲಾಗಿದೆ. ಈ ಸ್ಪರ್ಧೆಗೆ ಹಾಜರಾಗುವ ವಿದ್ಯಾರ್ಥಿಗಳು ಕೋವಿಡ್-೧೯ ನಿಯಮಗಳನ್ನು ಪಾಲಿಸುವಂತೆ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಡಾ.ಅಮ್ಮಾಟಂಡ ಪಾರ್ವತಿ ಅಪ್ಪಯ್ಯ ಅವರು ತಿಳಿಸಿದ್ದಾರೆ