ಮಡಿಕೇರಿ, ಮಾ. ೨: ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕ್ರೀಡಾ, ಸಾಂಸ್ಕೃತಿಕ ಮತ್ತು ವಿವಿಧ ಸಮಿತಿಗಳ ಉದ್ಘಾಟನಾ ಸಮಾರಂಭವು ತಾ ೫ ರಂದು ಬೆಳಗ್ಗೆ ೧೦.೩೦ ಗಂಟೆಗೆ ವೀರಾಜಪೇಟೆಯ ಮೀನುಪೇಟೆಯಲ್ಲಿರುವ ಮುನ್ಸಿಪಲ್ ಶಾಲೆಯ ಕಲಾ ವಿಭಾಗದ ಸಭಾಂಗಣದಲ್ಲಿ ನಡೆಯಲಿದೆ.

ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಹಾಗೂ ಶಾಸಕ ಕೆ.ಜಿ. ಬೋಪಯ್ಯ, ಬೆಂಗಳೂರು ಕನ್ನಡ ಜಾನಪದ ಪರಿಷತ್ ಅಧ್ಯಕ್ಷರಾದ ಡಾ.ಎಸ್.ಬಾಲಾಜಿ, ಅಂರ‍್ರಾಷ್ಟಿçÃಯ ಮಾಜಿ ಹಾಕಿ ಆಟಗಾರರಾದ ಒಲಂಪಿಯನ್ ಬಾಳೆಯಡ ಕೆ.ಸುಬ್ರಮಣಿ, ವೀರಾಜಪೇಟೆ ಸ.ಪ್ರ.ದ. ಕಾಲೇಜಿನ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮೂಕೊಂಡ ಬೋಸ್‌ದೇವಯ್ಯ, ವೀರಾಜಪೇಟೆ ಸ.ಪ್ರ.ದ. ಕಾಲೇಜಿನ ಪ್ರಾಂಶುಪಾಲ ಡಾ. ಟಿ.ಕೆ. ಬೋಪಯ್ಯ ಇತರರು ಪಾಲ್ಗೊಳ್ಳಲಿದ್ದಾರೆ.