ಮಡಿಕೇರಿ, ಮಾ. ೨: ವೀರಾಜಪೇಟೆ ಸೈಂಟ್ ಆನ್ಸ್ ಪದವಿ ಕಾಲೇಜು ವತಿಯಿಂದ ನುಡಿ ಸೌರಭ ೨೦೨೧ ಹಾಗೂ ಅವನಿ ಕೃತಿ ಬಿಡುಗಡೆ ಸಮಾರಂಭವು ತಾ. ೬ ರಂದು ಬೆಳಗ್ಗೆ ೧೦ ಗಂಟೆಗೆ ಸೈಂಟ್ ಆನ್ಸ್ ಪದವಿ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್, ವೀರಾಜಪೇಟೆ ಸೆಂಟ್ ಆನ್ಸ್ ವಿದ್ಯಾಸಂಸ್ಥೆಯ ವ್ಯವಸ್ಥಾಪಕ ರೆ.ಫಾ.ಮದಲೈ ಮುತ್ತು, ಮೈಸೂರು ಜಾನಪದ ವಿದ್ವಾಂಸ ಪಿ.ಕೆ.ರಾಜಶೇಖರ್, ಮಡಿಕೇರಿ ಸ.ಪ್ರ.ದ. ಮಹಿಳಾ ಕಾಲೇಜಿನ ಕನ್ನಡ ಸಹಪ್ರಾಧ್ಯಾಪಕರಾದ ಕೋರನ ಸರಸ್ವತಿ ಪ್ರಕಾಶ್, ಸೈಂಟ್ ಆನ್ಸ್ ಪದವಿ ಕಾಲೇಜಿನ ಪ್ರಾಂಶುಪಾಲ ರೆ.ಫಾ.ರೋನಿ ರವಿಕುಮಾರ್, ಕೊಡಗು ಜಿಲ್ಲಾ ಲೇಖಕ ಹಾಗೂ ಕಲಾವಿದರ ಬಳಗದ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಇತರರು ಪಾಲ್ಗೊಳ್ಳಲಿದ್ದಾರೆ.