ಮಡಿಕೇರಿ, ಮಾ. ೨: ಕುಶಾಲನಗರ ವಿದ್ಯುತ್ ಉಪ-ಕೇಂದ್ರದಿAದ ಹೊರಹೋಗುವ ಭುವನಗರಿ ಫೀಡರ್‌ಗಳಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಬೇಕಿದ್ದು, ತಾ. ೪ ರಂದು ಬೆಳಗ್ಗೆ ೧೦ ಗಂಟೆಯಿAದ ಸಂಜೆ ೪ ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಕೂಡಿಗೆ ಸೀಗೆಹೊಸೂರು, ಭುವನಗಿರಿ, ಹುದುಗೂರು ಹಾರಂಗಿ ಯಡವನಾಡು ಹಾಗೂ ಸುತ್ತಮುತ್ತ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.