ಸೋಮವಾರಪೇಟೆ,ಮಾ.೨: ಅನೂಚಾನವಾಗಿ ನಡೆದುಕೊಂಡು ಬರುತ್ತಿರುವ ತಾಲೂಕಿನ ಗರ್ವಾಲೆ ಗ್ರಾಮದ ಕೋಟೆಬೆಟ್ಟ ಶ್ರೀ ಬೊಟ್ಲಪ್ಪ ಈಶ್ವರ ದೇವರ ಉತ್ಸವ ಈ ಬಾರಿಯೂ ಶ್ರದ್ಧಾ ಭಕ್ತಿಯಿಂದ ನಡೆಯಿತು. ಕೋಟೆಬೆಟ್ಟದ ತಟದಲ್ಲಿರುವ ಈಶ್ವರ ದೇವಾಲಯದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ನಂತರ ಗ್ರಾಮಸ್ಥರಿಂದ ಬೊಳಕಾಟ್ ನಡೆಯಿತು.

ಈ ಸಂದರ್ಭ ದೇವಾಲಯ ಸಮಿತಿ ಅಧ್ಯಕ್ಷ ದೊಡ್ಡೇರ ಕೆ. ಸುಧಿ ಮಾತನಾಡಿ, ಬೊಟ್ಲಪ್ಪ ಈಶ್ವರ ದೇವಾಲಯದಲ್ಲಿ ಬಹಳ ಹಿಂದಿನಿAದಲೂ ವಿಶೇಷ ಪೂಜಾ ಕಾರ್ಯಗಳನ್ನು ನಡೆಸಿಕೊಂಡು ಬರಲಾಗುತ್ತಿದ್ದು, ವಾರ್ಷಿಕ ಉತ್ಸವವನ್ನು ಶ್ರದ್ಧಾಭಕ್ತಿಯಿಂದ ಮುಂದುವರೆಸಿಕೊAಡು ಹೋಗಲಾಗುತ್ತಿದೆ ಎಂದರು.

ಈ ಸಂದರ್ಭ ದೇವಾಲಯ ಸಮಿತಿ ಪ್ರಧಾನ ಕಾರ್ಯದರ್ಶಿ ಐ.ಕೆ. ಮಾಚಯ್ಯ, ದೇವರ ಸಮಿತಿಯ ಮುಖ್ಯಸ್ಥರಾದ ಟಿ.ಎನ್. ಈರಪ್ಪ, ಒ.ಪಿ. ಉತ್ತಪ್ಪ, ಎಚ್.ಎಂ. ರಾಜಪ್ಪ, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷರಾದ ಎಂ.ಬಿ. ಅಭಿಮನ್ಯುಕುಮಾರ್ ಸೇರಿದಂತೆ ಗ್ರಾಮಸ್ಥರು ಪಾಲ್ಗೊಂಡಿದ್ದರು.