ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ

ಬೆಂಗಳೂರು, ಮಾ. ೩: ರಾಸಲೀಲೆ ವೀಡಿಯೋ ಸಿಡಿ ಪ್ರಕರಣಕ್ಕೆ ಸಂಬAಧಿಸಿದAತೆ ತೀವ್ರ ವಿರೋಧ ಎದುರಿಸುತ್ತಿದ್ದ ರಮೇಶ್ ಜಾರಕಿಹೊಳಿ ಅವರು ಕೊನೆಗೂ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ರಮೇಶ್ ಜಾರಕಿಹೊಳಿ ರಾಜೀನಾಮೆ ಪತ್ರ ರವಾನಿಸಿದ್ದು, ಈ ಘಟನೆಯಿಂದ ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಒಂದೇ ಒಂದು ಕಾರಣಕ್ಕಾಗಿ ರಾಜೀನಾಮೆ ಸಲ್ಲಿಕೆ ಮಾಡಿದ್ದೇನೆ ಈ ಪ್ರಕರಣದ ಕುರಿತು ಕೂಲಂಕುಷ ತನಿಖೆಯಾಗಬೇಕಿದ್ದು, ತನಿಖೆ ಬಳಿಕ ನಾನು ನಿರ್ದೋಷಿ ಎಂದು ಬಹಿರಂಗವಾದ ಬಳಿಕ ಮತ್ತೆ ನನ್ನ ಸ್ಥಾನ ಪಡೆಯುತ್ತೇನೆ ಎಂದು ಪತ್ರದಲ್ಲಿ ರಮೇಶ್ ಜಾರಕಿಹೊಳಿ ಉಲ್ಲೇಖಿಸಿದ್ದಾರೆ ರಮೇಶ್ ಜಾರಕಿಹೊಳಿ ರಾಜೀನಾಮೆಯನ್ನು ಸಿಎಂ ಯಡಿಯೂರಪ್ಪ ಅಂಗೀಕರಿಸಿದ್ದಾರೆ.