ಕೂಡಿಗೆ, ಮಾ.೩: ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುದುಗೂರು ಗ್ರಾಮದಲ್ಲಿರುವ ಶ್ರೀ ಉಮಾಮಹೇಶ್ವರ ದೇವಾಲಯದ ಆವರಣದಲ್ಲಿ ತಾ ೧೧ ರಂದು ಶಿವರಾತ್ರಿ ಕಾರ್ಯಕ್ರಮ ನಡೆಯಲ್ಲಿದೆ.
ಹಬ್ಬದ ಅಂಗವಾಗಿ ಮಹಾಗಣಪತಿ ಹೋಮ, ಮೃತ್ಯುಂಜಯ ಹೋಮ ರುದ್ರಹೋಮ, ರುದ್ರಾಭಿಷೇಕ ಸೇರಿದಂತೆ ವಿವಿಧ ಪೂಜಾ ಕಾರ್ಯಕ್ರಮಗಳು ನಡೆಯಲಿವೆ. ಅಲ್ಲದೆ ಶ್ರೀ ಉಮಾಮಹೇಶ್ವರ ಮೂರ್ತಿ ಮೆರವಣಿಗೆ ದೇವಾಲಯದ ಆವರಣದಲ್ಲಿ ನೆರವೇರಲಿದೆ ಎಂದು ದೇವಾಲಯ ಸಮಿತಿಯ ಅಧ್ಯಕ್ಷ ಟಿ.ಎಂ. ಚಾಮಿ, ಕಾರ್ಯದರ್ಶಿ ಸುರೇಶ್ ತಿಳಿಸಿದ್ದಾರೆ.