ಮಡಿಕೇರಿ, ಮಾ.೩: ಭಾಷೆ ಮತ್ತು ಸಂಸ್ಕೃತಿ ಒಂದು ನಾಣ್ಯದ ಎರಡು ಮುಖಗಳಾಗಿದ್ದು, ಆ ದಿಸೆಯಲ್ಲಿ ಅರೆಭಾಷೆ ಸಂಸ್ಕೃತಿ, ಸಂಸ್ಕಾರ ಮತ್ತು ಸಂಪ್ರದಾಯಗಳನ್ನು ಉಳಿಸಿ ಬೆಳೆಸಿ ಕೊಂಡು ಹೋಗಲು ಶ್ರಮಿಸಬೇಕಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿವೃತ್ತ ಅಧಿಕಾರಿ ಅಮೆ ದಮಯಂತಿ ಕರೆ ನೀಡಿದರು.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಸಾಹಿತ್ಯ ಅಕಾಡೆಮಿ ವತಿಯಿಂದ ನಗರದ ಕೊಡಗು ಗೌಡ ಸಮಾಜದ ಮಡಿಕೇರಿ, ಮಾ.೩: ಭಾಷೆ ಮತ್ತು ಸಂಸ್ಕೃತಿ ಒಂದು ನಾಣ್ಯದ ಎರಡು ಮುಖಗಳಾಗಿದ್ದು, ಆ ದಿಸೆಯಲ್ಲಿ ಅರೆಭಾಷೆ ಸಂಸ್ಕೃತಿ, ಸಂಸ್ಕಾರ ಮತ್ತು ಸಂಪ್ರದಾಯಗಳನ್ನು ಉಳಿಸಿ ಬೆಳೆಸಿ ಕೊಂಡು ಹೋಗಲು ಶ್ರಮಿಸಬೇಕಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿವೃತ್ತ ಅಧಿಕಾರಿ ಅಮೆ ದಮಯಂತಿ ಕರೆ ನೀಡಿದರು.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಸಾಹಿತ್ಯ ಅಕಾಡೆಮಿ ವತಿಯಿಂದ ನಗರದ ಕೊಡಗು ಗೌಡ ಸಮಾಜದಕೊಡಗು ಗೌಡ ಸಮಾಜದ ಕಾರ್ಯದರ್ಶಿ ಕೋಡಿ ಚಂದ್ರಶೇಖರ್ ಮಾತನಾಡಿ ಅರೆಭಾಷೆ ಸಂಸ್ಕೃತಿ ತರಬೇತಿ ಶಿಬಿರಗಳನ್ನು ಗ್ರಾಮ ಮಟ್ಟದಲ್ಲಿ ಆಯೋಜಿಸುವಂತಾಗಬೇಕು ಎಂದು ಸಲಹೆ ನೀಡಿದರು.
ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಅಧ್ಯಕ್ಷ ಕುಡೆಕಲ್ ಸಂತೋಷ್ ಮಾತನಾಡಿ ಅರೆಭಾಷೆ ಸಂಸ್ಕೃತಿ, ಸಾಹಿತ್ಯ ಬೆಳವಣಿಗೆಗೆ ಅಕಾಡೆಮಿ ಶ್ರಮಿಸುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದರು.
ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷಿö್ಮÃನಾರಾಯಣ ಕಜೆಗದ್ದೆ, ಅರೆಭಾಷೆ, ಸಂಸ್ಕೃತಿ ತರಬೇತಿ ಶಿಬಿರವನ್ನು ಆಲೂರು ಸಿದ್ದಾಪುರ, ಭಾಗಮಂಡಲ ಮತ್ತಿತರ ಕಡೆಗಳಲ್ಲಿ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೂ ಕಾರ್ಯಾಗಾರ ಏರ್ಪಡಿಸ ಲಾಗುವುದು ಎಂದರು.
ಅರೆಭಾಷೆ, ಸಂಸ್ಕೃತಿ ತರಬೇತಿ ಶಿಬಿರದ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸಿದ ತಳೂರು ಯಶೋಧ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿ ಅರೆಭಾಷೆ ಸಂಸ್ಕೃತಿ ಬಗ್ಗೆ ಯುವಜನರಿಗೆ ತಿಳಿಸುವಂತಾಗ ಬೇಕೆಂದರು.
ಅಕಾಡೆಮಿ ಸದಸ್ಯರಾದ ಧನಂಜಯ ಅಗೋಳಿಕಜೆ, ಪ್ರೇಮ ರಾಘವಯ್ಯ ಚೊಕ್ಕಾಡಿ, ಕೆ.ಸಿ. ದಯಾನಂದ, ಇತರರು ಇದ್ದರು. ರಿಜಿಸ್ಟಾರ್ ಚಿನ್ನಸ್ವಾಮಿ ಸ್ವಾಗತಿಸಿದರು. ಕಡ್ಲೇರ ಆಶಾ ನಿರೂಪಿಸಿದರು. ಇಂಚರ ತಂಡದವರು ಪ್ರಾರ್ಥಿಸಿದರು. ಬೈತಡ್ಕ ಜಾನಕಿ ವಂದಿಸಿದರು.