ಮಡಿಕೇರಿ, ಮಾ. ೫: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಮರಗೋಡು ಐಮಂಡ ಪೊಮ್ಮಕ್ಕಡ ಕೂಟ, ಇವರ ಸಹಯೋಗದಲ್ಲಿ ಪೊಮ್ಮಕ್ಕಡ ನಮ್ಮೆ-೨೦೨೧ ಕಾರ್ಯಕ್ರಮ ತಾ. ೯ ರಂದು ಬೆಳಿಗ್ಗೆ ೧೦ ಗಂಟೆಗೆ ಮರಗೋಡು ವಿಎಸ್ಎಸ್ಎನ್ ಸಭಾಂಗಣದಲ್ಲಿ ನಡೆಯಲಿದೆ.
ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಉಪನ್ಯಾಸಕಿ ಡಾ. ಬೋಡುಕುಟ್ಟಡ ರಾಧಿಕ ಕುಟ್ಟಪ್ಪ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷೆ ಡಾ. ಅಮ್ಮಾಟಂಡ ಪಾರ್ವತಿ ಅಪ್ಪಯ್ಯ, ಐಮಂಡ ಪೊಮ್ಮಕ್ಕಡ ಕೂಟದ ಅಧ್ಯಕ್ಷೆ ಐಮಂಡ ಪುಷ್ಪಾವತಿ, ಮರಗೋಡು ಗ್ರಾ.ಪಂ. ಅಧ್ಯಕ್ಷೆ ಐಯಂಡ್ರ ಪೂರ್ಣಿಮ ಶ್ರೀನಿವಾಸ್ ಇತರರು ಪಾಲ್ಗೊಳ್ಳಲಿದ್ದಾರೆ. ಕಾಲಕೊತ್ತನಕೆ ಪೊಮ್ಮಕ್ಕಡ ಬದ್ಕ್ಲ್ ಬದಲಾವಣೆ ಎಂಬ ವಿಷಯದ ಬಗ್ಗೆ ವೀರಾಜಪೇಟೆ ತಾ.ಪಂ. ಮಾಜಿ ಅಧ್ಯಕ್ಷೆ ಅಮ್ಮತ್ತಿರ ರೇವತಿ ಪರಮೇಶ್ವರ ಅವರು ವಿಚಾರ ಮಂಡನೆ ಮಾಡಲಿದ್ದಾರೆ. ಅಲ್ಲದೇ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಅಕಾಡೆಮಿ ಪ್ರಕಟಿತ ಪುಸ್ತಕ ಮತ್ತು ಸಿ.ಡಿ.ಗಳ ಪ್ರದರ್ಶನ ಮತ್ತು ಮಾರಾಟ ಇರುತ್ತದೆ. ಸರ್ಕಾರದ ಮಾರ್ಗಸೂಚಿಯಂತೆ ಈ ಕಾರ್ಯಕ್ರಮವನ್ನು ನಡೆಸಲಾಗುವುದು ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ರಿಜಿಸ್ಟಾçರ್ ತಿಳಿಸಿದ್ದಾರೆ.