ಮಡಿಕೇರಿ, ಮಾ. ೫: ಕಸ ವಿಲೇವಾರಿ ಮಾಡಲು ಜಾಗಗಳನ್ನು ಗುರುತಿಸಿ ತ್ವರಿತವಾಗಿ ಸರ್ವೆ ಕಾರ್ಯ ಮುಗಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಚಾರುಲತ್ ಸೋಮಲ್ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕಂದಾಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಸ ವಿಲೇವಾರಿ ಸಂಬAಧಿಸಿದAತೆ ಸರ್ವೇ ಆಗಿರುವ ಜಾಗಗಳ ವರದಿ ಸಲ್ಲಿಸಬೇಕು. ಜಾಗವಿಲ್ಲದ ಕಡೆ ಬದಲಿ ಜಾಗ ಗುರುತಿಸಿ ವರದಿ ನೀಡಬೇಕು. ಯಾವುದೇ ರೀತಿಯ ವಿಳಂಬಕ್ಕೆ ಅವಕಾಶ ನೀಡಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಕಸ ವಿಲೇವಾರಿ ಮತ್ತು ನಿವೇಶನಕ್ಕಾಗಿ ಅವಶ್ಯವಿರುವ ಜಾಗಗಳ ಬಗ್ಗೆ ತಾಲೂಕು ಹಾಗೂ ಹೋಬಳಿವಾರು ವರದಿ ನೀಡುವಂತೆ ಜಿ.ಪಂ. ಯೋಜನಾ ನಿರ್ದೇಶಕರಿಗೆ ಜಿಲ್ಲಾಧಿಕಾರಿ ಅವರು ಸೂಚಿಸಿದರು. ಜಿಲ್ಲೆಯಲ್ಲಿನ ಅಂಗನವಾಡಿ ಮತ್ತು ವಸತಿ ನಿಲಯ ಸಮುದಾಯಗಳಿಗೆ ಸ್ವಂತ ಕಟ್ಟಡವಿಲ್ಲದಿದ್ದರೆ ತಾಲೂಕು ಮತ್ತು ಗ್ರಾಮವಾರು ಪ್ರಸ್ತಾವನೆಯನ್ನು ಸಲ್ಲಿಸುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಬೆಳೆ ಸಮೀಕ್ಷೆ ಬಗ್ಗೆ ಈಗಾಗಲೇ ಗ್ರಾಮ ಲೆಕ್ಕಾಧಿಕಾರಿಗಳಿಗೆ ತರಬೇತಿ ಯನ್ನು ನೀಡಿರುವುದರಿಂದ ಬೆಳೆ ಸಮೀಕ್ಷೆ ಕಾರ್ಯವನ್ನು ಪೂರ್ಣ ಗೊಳಿಸಲು ಕ್ರಮಕೈಗೊಳ್ಳುವಂತೆ ಸಂಬAಧಿಸಿದ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ತಿಳಿಸಿದರು.
ಈಗಾಗಲೇ ಅರಣ್ಯ ಹಕ್ಕುಪತ್ರ ನೀಡಲಾಗಿರುವುದಕ್ಕೆ ಆರ್‌ಟಿಸಿ ನೀಡಬೇಕು. ಆರ್‌ಟಿಸಿ ಆಗಿರದ ಅವಶ್ಯವಿರುವ ಜಾಗಗಳ ಬಗ್ಗೆ ತಾಲೂಕು ಹಾಗೂ ಹೋಬಳಿವಾರು ವರದಿ ನೀಡುವಂತೆ ಜಿ.ಪಂ. ಯೋಜನಾ ನಿರ್ದೇಶಕರಿಗೆ ಜಿಲ್ಲಾಧಿಕಾರಿ ಅವರು ಸೂಚಿಸಿದರು. ಜಿಲ್ಲೆಯಲ್ಲಿನ ಅಂಗನವಾಡಿ ಮತ್ತು ವಸತಿ ನಿಲಯ ಸಮುದಾಯಗಳಿಗೆ ಸ್ವಂತ ಕಟ್ಟಡವಿಲ್ಲದಿದ್ದರೆ ತಾಲೂಕು ಮತ್ತು ಗ್ರಾಮವಾರು ಪ್ರಸ್ತಾವನೆಯನ್ನು ಸಲ್ಲಿಸುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಬೆಳೆ ಸಮೀಕ್ಷೆ ಬಗ್ಗೆ ಈಗಾಗಲೇ ಗ್ರಾಮ ಲೆಕ್ಕಾಧಿಕಾರಿಗಳಿಗೆ ತರಬೇತಿ ಯನ್ನು ನೀಡಿರುವುದರಿಂದ ಬೆಳೆ ಸಮೀಕ್ಷೆ ಕಾರ್ಯವನ್ನು ಪೂರ್ಣ ಗೊಳಿಸಲು ಕ್ರಮಕೈಗೊಳ್ಳುವಂತೆ ಸಂಬAಧಿಸಿದ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ತಿಳಿಸಿದರು.
ಈಗಾಗಲೇ ಅರಣ್ಯ ಹಕ್ಕುಪತ್ರ ನೀಡಲಾಗಿರುವುದಕ್ಕೆ ಆರ್‌ಟಿಸಿ ನೀಡಬೇಕು. ಆರ್‌ಟಿಸಿ ಆಗಿರದ ಪರ್ಯಾಯ ಜಾಗ ಗುರುತಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಡಿ. ರೂಪ ಅವರು ಸೂಚಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಿಂಗರಾಜು ಅವರು ಮಾತನಾಡಿ, ಜಿಲ್ಲೆಯಲ್ಲಿ ೧೬೩ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡವಿಲ್ಲ ಎಂದು ಮಾಹಿತಿ ನೀಡಿದರು. ಐಟಿಡಿಪಿ ಇಲಾಖಾ ಅಧಿಕಾರಿ ಸಿ. ಶಿವಕುಮಾರ್ ಅವರು ಅರಣ್ಯ ಹಕ್ಕು ಪತ್ರ ನೀಡಿರುವುದಕ್ಕೆ ಕೆಲವು ಕಡೆಗಳಲ್ಲಿ ಆರ್‌ಟಿಸಿ ನೀಡಬೇಕಿದೆ ಎಂದು ಜಿಲ್ಲಾಧಿಕಾರಿ ಅವರ ಗಮನಕ್ಕೆ ತಂದರು.
ಬೆಳೆ ಸಮೀಕ್ಷೆ ಬಗ್ಗೆ ತಾಲೂಕು ಸಮಿತಿ ಮಾಡಿ ಪ್ರತಿಯೊಂದು ಗ್ರಾಮಕ್ಕೆ ಹೋಗಿ ಸರ್ವೇ ಮಾಡಲು ಈಗಾಗಲೇ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಶಬಾನಾ ಎಂ. ಷೇಕ್ ಅವರು ತಿಳಿಸಿದರು. ಉಪ ವಿಭಾಗಾಧಿಕಾರಿ ಈಶ್ವರಕುಮಾರ್, ಜಿ.ಪಂ. ಯೋಜನಾ ನಿರ್ದೇಶಕ ಶ್ರೀಕಂಠಮೂರ್ತಿ, ಡಿಡಿಎಲ್‌ಆರ್ ಶ್ರೀನಿವಾಸ್ ಅವರು ಸಭೆಯಲ್ಲಿ ಹಲವು ಮಾಹಿತಿ ನೀಡಿದರು. ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಶಶಿಧರ್, ತಹಶೀಲ್ದಾರರಾದ ಮಹೇಶ್, ಗೋವಿಂದರಾಜು, ಯೋಗಾನಂದ, ಭೂದಾಖಲೆಗಳ ಸಹಾಯಕ ನಿರ್ದೇಶಕರಾದ ವಿರೂಪಾಕ್ಷ, ಶಿರಸ್ತೇದಾರರು, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಸುರೇಶ್ ಭಟ್, ಇತರರಿದ್ದರು.