ಮಡಿಕೇರಿ, ಮಾ. ೫: ಕೆಪಿಸಿಸಿ ಮೀಡಿಯಾ ಪ್ಯಾನಲಿಸ್ಟ್ ಗಳನ್ನಾಗಿ (ಮಾಧ್ಯಮ ವಕ್ತಾರರು) ಕೊಡಗು ಜಿಲ್ಲೆಯ ಇಬ್ಬರನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಆರ್.ಕೆ. ಅಬ್ದುಲ್ ಸಲಾಂ ಹಾಗೂ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬೇಕಲ್ ಎಸ್. ರಮಾನಾಥ್ ಅವರನ್ನು ಕೆಪಿಸಿಸಿ ಪ್ಯಾನಲಿಸ್ಟ್ ಗಳನ್ನಾಗಿ ನೇಮಿಸಲಾಗಿದೆ.