ಕುಶಾಲನಗರ, ಮಾ. ೫: ಕುಶಾಲನಗರ ಪಟ್ಟಣದ ಕಲುಷಿತ ತ್ಯಾಜ್ಯ ನೇರವಾಗಿ ನದಿಗೆ ಸೇರದಂತೆ ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ಪಟ್ಟಣ ಪಂಚಾಯಿತಿ ನೂತನ ಮುಖ್ಯಾಧಿಕಾರಿ ಕೃಷ್ಣಪ್ರಸಾದ್ ತಿಳಿಸಿದ್ದಾರೆ.
ಅವರು ಪಂಚಾಯ್ತಿ ಅಧ್ಯಕ್ಷರು, ಉಪಾಧ್ಯಕ್ಷರು, ಸ್ಥಾಯಿ ಸಮಿತಿ ಅಧ್ಯಕ್ಷರ ಜೊತೆ ಕುಶಾಲನಗರದ ಪಟ್ಟಣ ವ್ಯಾಪ್ತಿಯ ವಿವಿಧೆಡೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಪಟ್ಟಣದ ಬಹುತೇಕ ಕಲುಷಿತ ತ್ಯಾಜ್ಯಗಳು ನೇರವಾಗಿ ನದಿ ಸೇರುವ ಕುಶಾಲನಗರ, ಮಾ. ೫: ಕುಶಾಲನಗರ ಪಟ್ಟಣದ ಕಲುಷಿತ ತ್ಯಾಜ್ಯ ನೇರವಾಗಿ ನದಿಗೆ ಸೇರದಂತೆ ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ಪಟ್ಟಣ ಪಂಚಾಯಿತಿ ನೂತನ ಮುಖ್ಯಾಧಿಕಾರಿ ಕೃಷ್ಣಪ್ರಸಾದ್ ತಿಳಿಸಿದ್ದಾರೆ.
ಅವರು ಪಂಚಾಯ್ತಿ ಅಧ್ಯಕ್ಷರು, ಉಪಾಧ್ಯಕ್ಷರು, ಸ್ಥಾಯಿ ಸಮಿತಿ ಅಧ್ಯಕ್ಷರ ಜೊತೆ ಕುಶಾಲನಗರದ ಪಟ್ಟಣ ವ್ಯಾಪ್ತಿಯ ವಿವಿಧೆಡೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಪಟ್ಟಣದ ಬಹುತೇಕ ಕಲುಷಿತ ತ್ಯಾಜ್ಯಗಳು ನೇರವಾಗಿ ನದಿ ಸೇರುವ ತ್ಯಾಜ್ಯ ಸೇರುವ ಸ್ಥಳಗಳಲ್ಲಿ ಸಂಸ್ಕರಣಾ ಘಟಕ ನಿರ್ಮಿಸಲಾಗುವುದು ಎಂದು ತಿಳಿಸಿದ್ದಾರೆ.
ಸ್ಥಾಯಿ ಸಮಿತಿ ಅಧ್ಯಕ್ಷ ಸುರೇಶ್ ನಗರದ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.
ಸಾರ್ವಜನಿಕರು ಈ ನಿಟ್ಟಿನಲ್ಲಿ ಪಪಂ ಆಡಳಿತ ಮತ್ತು ಕಾರ್ಮಿಕರೊಂದಿಗೆ ಕೈಜೋಡಿಸುವ ಮೂಲಕ ಸ್ವಚ್ಛ ಕುಶಾಲನಗರ ನಿರ್ಮಾಣಕ್ಕೆ ಸಹಕರಿಸಬೇಕೆಂದರು. ಉಪಾಧ್ಯಕ್ಷೆ ಸುರಯ್ಯಬಾನು, ಸದಸ್ಯರು ಹಾಗೂ ಚೇಂಬರ್ ಆಫ್ ಕಾಮರ್ಸ್ ಸ್ಥಾಯಿ ಸಮಿತಿ ಅಧ್ಯಕ್ಷ ಅಮೃತ್ರಾಜ್, ಇಂಜಿನಿಯರ್ ಶ್ರೀದೇವಿ ಇದ್ದರು.