ಮಡಿಕೇರಿ, ಮಾ. ೫: ಜಿಲ್ಲಾ ಮಟ್ಟದ ಟೆನ್ನಿಕೋಯ್ಟ್ ಮತ್ತು ಖೋ-ಖೋ ಪಂದ್ಯಾಟದಲ್ಲಿ ವಿಜೇತರಾಗಿ ಸಂಪಾಜೆ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಚರಿತ್ ಬಿ.ಡಿ., ಅಶೋಕ ಬಿ.ವಿ., ಹರಿಪ್ರಸಾದ್ ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು. ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ಕುಶಾಲಪ್ಪ ಕೆ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದಾರೆ.